Tuesday, May 14, 2024
Homeಕರಾವಳಿರೂಪಾಂತರಿ ಕೊರೊನಾ ಭೀತಿ ಹಿನ್ನೆಲೆ: ಹೊಸ ವರ್ಷಾಚರಣೆಗೆ ಮಂಗಳೂರಿನಲ್ಲಿ ಬೀಚ್ ಪ್ರವೇಶಕ್ಕೆ ನಿಷೇಧ

ರೂಪಾಂತರಿ ಕೊರೊನಾ ಭೀತಿ ಹಿನ್ನೆಲೆ: ಹೊಸ ವರ್ಷಾಚರಣೆಗೆ ಮಂಗಳೂರಿನಲ್ಲಿ ಬೀಚ್ ಪ್ರವೇಶಕ್ಕೆ ನಿಷೇಧ

spot_img
- Advertisement -
- Advertisement -

ಮಂಗಳೂರು: ರೂಪಾಂತರಿ ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಮಂಗಳೂರಿನ ಬೀಚ್ ಪ್ರವೇಶ ನಿಷೇಧ ಮಾಡಿ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

ಡಿಸೆಂಬರ್ 31 ರ ಮಧ್ಯಾಹ್ನ 12 ಗಂಟೆಯಿಂದ ಜನವರಿ 2 ರ ಮಧ್ಯಾಹ್ನ 12 ಗಂಟೆಯವರೆಗೆ ನಿಷೇಧ ಹೇರಲಾಗಿದ್ದು, ಮಂಗಳೂರಿನ ಉಳ್ಳಾಲ, ಸೋಮೇಶ್ವರ, ಮೊಗವೀರಪಟ್ಣ, ಪಣಂಬೂರು, ತಣ್ಣೀರುಬಾವಿ, ಸಸಿಹಿತ್ಲು ಮತ್ತು ಸುರತ್ಕಲ್ ಸೇರಿದಂತೆ ಬೀಚ್‌ಗಳಿಗೆ ಪ್ರವಾಸಿಗರು ಭೇಟಿ ನೀಡುವಂತಿಲ್ಲ. ಸ್ಥಳೀಯರು ಮತ್ತು ಮೀನುಗಾರರಿಗೆ ಈ ಆದೇಶ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ರಜೆ, ಹೊಸ ವರ್ಷದ ಸಂಭ್ರಮದ ಹಿನ್ನಲೆಯಲ್ಲಿ ಸಾವಿರಾರು ಜನರು ಬೀಚ್‌ಗಳಿಗೆ ಭೇಟಿ ನೀಡುತ್ತಾರೆ. ಇದನ್ನು ತಡೆಯಲು ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.

- Advertisement -
spot_img

Latest News

error: Content is protected !!