Monday, June 8, 2026
Homeಕರಾವಳಿಉಪ್ಪಿನಂಗಡಿ ಠಾಣೆಗೆ ಮುತ್ತಿಗೆ ಹಾಕಿದ ಸಾರ್ವಜನಿಕರು, ಪಿಎಫ್ಐ ಮುಖಂಡರು ಬಿಡುಗಡೆಯಾಗುವ ತನಕ ಪ್ರತಿಭಟನೆ !

ಉಪ್ಪಿನಂಗಡಿ ಠಾಣೆಗೆ ಮುತ್ತಿಗೆ ಹಾಕಿದ ಸಾರ್ವಜನಿಕರು, ಪಿಎಫ್ಐ ಮುಖಂಡರು ಬಿಡುಗಡೆಯಾಗುವ ತನಕ ಪ್ರತಿಭಟನೆ !

- Advertisement -
- Advertisement -

ಉಪ್ಪಿನಂಗಡಿ: ಪಾಪ್ಯುಲರ್ ಫ್ರಂಟ್ ಉಪ್ಪಿನಂಗಡಿ ನಾಯಕರ ಅಕ್ರಮ ಬಂಧನದ ವಿರುದ್ಧ ಸಾರ್ವಜನಿಕರಿಂದ ಉಪ್ಪಿನಂಗಡಿ ಠಾಣೆಗೆ ಮುತ್ತಿಗೆ ಹಾಕಲಾಗಿದೆ.

ಬಿಡುಗಡೆಗೊಳಿಸುವ ತನಕ ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದಾರೆ. ಅವಿಶ್ರಾಂತ ಪ್ರತಿಭಟನೆಯ ನಿರ್ಧಾರ ಕೈಗೊಂಡಿರುವ ಪ್ರತಿಭಟನಾಕಾರರು.

ಪಿಎಫ್ಐ ಸ್ಥಳೀಯ ಮುಖಂಡರುಗಳಾದ ಅಬ್ದುಲ್ ಹಮೀದ್ ಮೆಜೆಸ್ಟಿಕ್, ಮುಸ್ತಫಾ ಕಡವಿನಬಾಗಿಲು, ಝಕರಿಯಾ ಎಂಬುವವರು ಪೊಲೀಸರೊಂದಿಗೆ ನಿರಂತರ ಸಂಪರ್ಕದಲ್ಲಿದ್ದುಕೊಂಡು ತಲವಾರು ದಾಳಿಯಲ್ಲಿ ನಿರಪರಾಧಿಗಳಿಗೆ ಅನ್ಯಾಯವಾಗಬಾರದೆಂಬ ಕಾರಣಕ್ಕೆ ಪೊಲೀಸರ ಜೊತೆ ಮಾತನಾಡಲು ಬಂದ ಸಂದರ್ಭದಲ್ಲಿ ಪೊಲೀಸರು ಈ ಮೂವರು ಮುಖಂಡರನ್ನು ಠಾಣೆಯಲ್ಲಿ ಕೂರಿಸಿ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಆರೋಪಿಸಿ ಕಾರ್ಯಕರ್ತರು ಠಾಣೆಗೆ ಮುತ್ತಿಗೆ ಹಾಕಿದ್ದಾರೆ‌.

- Advertisement -

Latest News

error: Content is protected !!