Thursday, June 4, 2026
Homeಕರಾವಳಿಉಡುಪಿಉಡುಪಿ;ನೇಣು ಬಿಗಿದುಕೊಂಡು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಉಡುಪಿ;ನೇಣು ಬಿಗಿದುಕೊಂಡು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

- Advertisement -
- Advertisement -

ಉಡುಪಿ;ನೇಣು ಬಿಗಿದುಕೊಂಡು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಿರಿಯಡ್ಕದಲ್ಲಿ ನಡೆದಿದೆ. ಪೆರ್ಡೂರು ಪ್ರಥಮ ದರ್ಜೆ ಸರಕಾರಿ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿ ಹಿರಿಯಡ್ಕ ನಿವಾಸಿ ನಯನಾ(17) ಮೃತ ದುರ್ದೈವಿ.

ತನ್ನ ಮನೆಯಲ್ಲಿ ತಾನು ಒಬ್ಬಳೇ ಇದ್ದಾಗ ನಯನಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆಕೆಯ ತಾಯಿ ಶೋಭಾ ಈ ಬಗ್ಗೆ ಹಿರಿಯಡ್ಕ ಠಾಣೆಗೆ ದೂರು ನೀಡಿದ್ದಾರೆ. ತನ್ನದೇ ಚೂಡಿದಾರ್ ಶಾಲನ್ನು ಬಳಸಿ ಫ್ಯಾನಿಗೆ ನೇಣು ಬಿಗಿದುಕೊಂಡಿದ್ದಾಳೆ. ಘಟನೆಗೆ ಕಾರಣ ಏನೆಂದು ತಿಳಿದುಬಂದಿಲ್ಲ. ಪೊಲೀಸರು ಕೇಸು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!