Saturday, June 6, 2026
Homeತಾಜಾ ಸುದ್ದಿಜೂನ್ 20 ರಿಂದ 25ರೊಳಗೆ  ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಜೂನ್ 20 ರಿಂದ 25ರೊಳಗೆ  ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

- Advertisement -
- Advertisement -

ಬೆಂಗಳೂರು: 2021-22ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶಕ್ಕಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಜೂನ್ 20 ರಿಂದ 25ರೊಳಗೆ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆ ಉನ್ನತ ಮೂಲಗಳು ಖಚಿತಪಡಿಸಿವೆ.

ಮೇ. 18 ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆಗಳು ಕರ್ನಾಟಕದಲ್ಲಿ ಮುಗಿದಿದ್ದವು. ಪರೀಕ್ಷೆ ಮುಗಿದ ಕೂಡಲೇ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಮೌಲ್ಯಮಾಪನಕ್ಕೆ ಚಾಲನೆ ನೀಡಲಾಯಿತು. ನೋಂದಣಿ ಮಾಡಿದ ಪ್ರಾಧ್ಯಾಪಕರು ಪೂರ್ಣ ಪ್ರಮಾಣದಲ್ಲಿ ಮೌಲ್ಯಮಾಪನದಲ್ಲಿ ಪಾಲ್ಗೊಳ್ಳದ ಕಾರಣ ಪರೀಕ್ಷೆ ಫಲಿತಾಂಶ ಪ್ರಕಟದಲ್ಲಿ ವಿಳಂಬವಾಗಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ.

ಆರಂಭದಲ್ಲಿ ಜೂ. 15 ಕ್ಕೆ ಫಲಿತಾಂಶ ಪ್ರಕಟಿಸುವ ನಿರೀಕ್ಷೆಯಿತ್ತು. ಆದರೆ, ಈಗಿನ ಮೌಲ್ಯಮಾಪನ ವೇಗ ನೋಡಿದ್ರೆ ಜೂ. 20 ರಿಂದ 25 ರೊಳಗೆ ದ್ವಿತೀಯ ಪಿಯುಸಿ ಫಲಿತಾಂಶ ಹೊರ ಬರಲಿದೆ ಎಂದು ಶಿಕ್ಷಣ ಇಲಾಖೆ ಮೂಲಗಳು ಒನ್‌ಇಂಡಿಯಾ ಕನ್ನಡಕ್ಕೆ ಸ್ಪಷ್ಟಪಡಿಸಿವೆ. ಶಿಕ್ಷಣ ಸಚಿವರ ಸುದ್ದಿಗೋಷ್ಠಿ ಬಳಿಕ ದ್ವಿತೀಯ ಪಿಯುಸಿ ಫಲಿತಾಂಶ ಇಲಾಖೆಯ ಅಧಿಕೃತ ವೆಬ್ ತಾಣದಲ್ಲಿ ಪ್ರಕಟವಾಗಲಿದೆ.

- Advertisement -

Latest News

error: Content is protected !!