Wednesday, May 8, 2024
Homeತಾಜಾ ಸುದ್ದಿBig Breaking: ಜೂನ್ 18ರಂದು ಪಿಯುಸಿ ಇಂಗ್ಲಿಷ್, ಜೂ. 25ರಿಂದ SSLC ಪರೀಕ್ಷೆ !

Big Breaking: ಜೂನ್ 18ರಂದು ಪಿಯುಸಿ ಇಂಗ್ಲಿಷ್, ಜೂ. 25ರಿಂದ SSLC ಪರೀಕ್ಷೆ !

spot_img
- Advertisement -
- Advertisement -

ಬೆಂಗಳೂರು: ಲಾಕ್ ಡೌನ್ ನಿಂದಾಗಿ ಮುಂದೂಡಲಾಗಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಜೂನ್ 25ರಿಂದ ಜುಲೈ 4 ರವರೆಗೆ ಮತ್ತು ದ್ವೀತಿಯ ಪಿಯುಸಿಯ ಬಾಕಿಯಾಗಿರುವ ಇಂಗ್ಲೀಷ್ ಪರೀಕ್ಷೆಯನ್ನು ಜೂನ್ 18ರಂದು ನಡೆಸಲು ಸರಕಾರ ತೀರ್ಮಾನಿಸಿದೆ.

ಎಸ್ ಎಸ್ ಎಲ್ ಸಿಯ ಇಂಗ್ಲೀಷ್, ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ಪರೀಕ್ಷೆಗಳಿಗೆ ಒಂದೊಂದು ದಿನದ ಅಂತರವಿರಲಿದೆ. ಒಟ್ಟಾರೆ ಎಲ್ಲಾ ಪರೀಕ್ಷೆಗಳು 10 ದಿನದಲ್ಲಿ ಮುಗಿಯಲಿದೆ ಎಂದರು. ರಾಜ್ಯದಲ್ಲಿ 2879 ಪರೀಕ್ಷಾ ಕೇಂದ್ರಗಳಲ್ಲಿ SSLC ಪರೀಕ್ಷೆ ನಡೆಯಲಿದೆ

ಸ್ವಚ್ಛತೆಯ ಬಗ್ಗೆ ಕ್ರಮ:
ಈ ಕುರಿತು ಇಂದು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಪ್ರೌಢ ಶಿಕ್ಷಣ ಸಚಿವಸುರೇಶ್ ಕುಮಾರ್, ಕೇಂದ್ರದಲ್ಲಿ ವಿದ್ಯಾರ್ಥಿಗಳ ನಡುವೆ ಅಂತರ ಕಾಯ್ದುಕೊಂಡು ಪರೀಕ್ಷೆ ಬರೆಯಿಸಲಾಗುತ್ತದೆ. ಎಲ್ಲಾ ವಿದ್ಯಾರ್ಥಿಗಳು ಸ್ಯಾನಿಟೈಸರ್ ಬಳಸಬೇಕು ಮತ್ತು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದಿದ್ದಾರೆ.

ಪರೀಕ್ಷಾ ಕೇಂದ್ರಕ್ಕೆ ಬಂದ ವಿದ್ಯಾರ್ಥಿಗಳಿಗೆ ಆರೋಗ್ಯ ಸಮಸ್ಯೆ ಇದ್ದರೆ ಬೇರೆ ಕಡೆ ಪರೀಕ್ಷೆ ಬರೆಯಲು ಅವಕಾಶ ಮಾಡುತ್ತೇವೆ. ಪರೀಕ್ಷೆ ಆರಂಭಕ್ಕೂ ಮೊದಲು ಎಲ್ಲಾ ಕೊಠಡಿಗಳನ್ನು ಸ್ಯಾನಿಟೈಸ್ ಮಾಡುತ್ತೇವೆ ಎಂದರು.

ಮೊರಾರ್ಜಿ ದೇಸಾಯಿ ಶಾಲೆ, ಎಸ್ ಸಿ, ಎಸ್ ಟಿ ಹಾಸ್ಟಲ್ ಗಳನ್ನು ಕ್ವಾರಂಟೈನ್ ಮಾಡಿರುವ ಕಾರಣ ಅಲ್ಲಿನ ವಿದ್ಯಾರ್ಥಿಗಳು ಹತ್ತಿರದ ಶಾಲೆಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಗುವುದು. ವಲಸೆ ಕಾರ್ಮಿಕರ ಮಕ್ಕಳಿಗೆ ಕೂಡಾ ಇದೇ ರೀತಿ ವ್ಯವಸ್ಥೆ ಮಾಡಲಾಗುವುದು ಎಂದರು.

- Advertisement -
spot_img

Latest News

error: Content is protected !!