Friday, June 5, 2026
Homeಕರಾವಳಿಉಡುಪಿಉಡುಪಿ: ಹೃದಯಾಘಾತದಿಂದ ಪಿಯುಸಿ ವಿದ್ಯಾರ್ಥಿ ನಿಧನ

ಉಡುಪಿ: ಹೃದಯಾಘಾತದಿಂದ ಪಿಯುಸಿ ವಿದ್ಯಾರ್ಥಿ ನಿಧನ

- Advertisement -
- Advertisement -

ಉಡುಪಿ: ಪ್ರಥಮ ಪಿಯುಸಿ ವಿದ್ಯಾರ್ಥಿಯೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಉಡುಪಿ ತಾಲೂಕಿನ ಕೆಮ್ಮಣ್ಣುವಿನಲ್ಲಿ ನಡೆದಿದೆ.

ಕಲ್ಯಾಣಪುರ ಮಿಲಾಗ್ರೀಸ್ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿದ್ದ ಅಫ್ಕಾರ್(17) ಮೃತಪಟ್ಟ ವಿದ್ಯಾರ್ಥಿಯಾಗಿದ್ದಾನೆ. ಉಡುಪಿ ತಾಲೂಕಿನ ಸಂತೆಕಟ್ಟೆ ಸಮೀಪದ ಕೆಮ್ಮಣ್ಣು ನಿವಾಸಿಯಾಗಿದ್ದ ಅಫ್ಕಾರ್, ಹುಟ್ಟಿನಿಂದಲೇ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು ಡಿಸೆಂಬರ್ 6 ರಂದು ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆದಿದ್ದರು ಎನ್ನಲಾಗಿದೆ.

ಡಿಸೆಂಬರ್ 18 ರಂದು ಆಸ್ಪತ್ರೆಯಿಂದ ಮನೆಗೆ ಮರಳಿದ್ದ ಅಫ್ಕಾರ್ ಗೆ ನಂತರ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ವಿದ್ಯಾರ್ಥಿ ಅಫ್ಕಾರ್ ಮೃತಪಟ್ಟಿದ್ದು, ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -

Latest News

error: Content is protected !!