Monday, July 6, 2026
Homeಕರಾವಳಿಮಂಗಳೂರುಬಂಟ್ವಾಳ :ಬಸ್‌ಗಾಗಿ ಕಾಯುತ್ತಿದ್ದ ಪಿಯುಸಿ ವಿದ್ಯಾರ್ಥಿನಿಗೆ ಚೂರಿ ಇರಿದು ಪರಾರಿಯಾದ ಯುವಕ

ಬಂಟ್ವಾಳ :ಬಸ್‌ಗಾಗಿ ಕಾಯುತ್ತಿದ್ದ ಪಿಯುಸಿ ವಿದ್ಯಾರ್ಥಿನಿಗೆ ಚೂರಿ ಇರಿದು ಪರಾರಿಯಾದ ಯುವಕ

- Advertisement -
- Advertisement -

ಬಂಟ್ವಾಳ ತಾಲೂಕಿನ ಇರಾ ಗ್ರಾಮದಲ್ಲಿ ಕಾಲೇಜಿಗೆ ತೆರಳಲು ಬಸ್‌ಗಾಗಿ ಕಾಯುತ್ತಿದ್ದ ಪಿಯುಸಿ ವಿದ್ಯಾರ್ಥಿನಿಯ ಮೇಲೆ ಯುವಕನೊಬ್ಬ ಚೂರಿಯಿಂದ ಹಲ್ಲೆ ನಡೆಸಿದ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.ಸ್ಥಳೀಯ ವ್ಯಾಪಾರಿಯಾಗಿರುವ ಜವ್ವರ್ (28), ಬಂಟ್ವಾಳದ ಮೊಂತಿಮಾರ್ ಪಡ್ಪು ನಿವಾಸಿ, ಏಕಾಏಕಿ ವಿದ್ಯಾರ್ಥಿನಿಯ ಮೇಲೆ ಚೂರಿಯಿಂದ ದಾಳಿ ನಡೆಸಿ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ದಿನಾಂಕ: 06.07.2026 ರಂದು ಬೆಳಗ್ಗೆ ಸಮಯ ಸುಮಾರು 08.45 ಗಂಟೆಗೆ ಅಪ್ರಾಪ್ತ ಬಾಲಕಿಯು (17) ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಬಂಟ್ವಾಳ ಮೊಂತಿಮಾರು ಬಸ್ ನಿಲ್ದಾಣದ ಬಳಿ ಕಾಲೇಜಿಗೆ ತೆರಳುವರೇ ನಿಂತಿದ್ದಾಗ, ಸ್ಥಳಕ್ಕೆ ಬಂದ ಆರೋಪಿ ಬಂಟ್ವಾಳ ಮಂಚಿ ನಿವಾಸಿ ಮೊಹಮ್ಮದ್ ಜವ್ವಾರ್ (28) ಎಂಬಾತನು ಮಚ್ಚಿನಿಂದ ಬಾಲಕಿಯ ತಲೆ ಹಾಗೂ ಕೈಗೆ ಹಲ್ಲೆ ಮಾಡಿರುತ್ತಾನೆ. ಕೃತ್ಯ ನಡೆಸಿದ ಬಳಿಕ ಆರೋಪಿಯು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದು, ಬಾಲಕಿಯು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿರುವುದಾಗಿದೆ. ಪ್ರಸ್ತುತ ಬಾಲಕಿ ಪ್ರಾಣಾಪಾಯದಿಂದ ಪಾರಾಗಿದ್ದು, ಆರೋಪಿಯ ವಿಚಾರಣೆ ನಡೆಸಿ ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು.

- Advertisement -

Latest News

error: Content is protected !!