Friday, April 26, 2024
Homeತಾಜಾ ಸುದ್ದಿರಾಜ್ಯದ 530 ವಸತಿ ಶಾಲೆಗಳಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದಲೇ ಪಿಯುಸಿ ಆರಂಭ

ರಾಜ್ಯದ 530 ವಸತಿ ಶಾಲೆಗಳಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದಲೇ ಪಿಯುಸಿ ಆರಂಭ

spot_img
- Advertisement -
- Advertisement -

ಬೆಂಗಳೂರು : ರಾಜ್ಯದ 530 ವಸತಿ ಶಾಲೆಗಳಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದಲೇ ಪಿಯುಸಿ  ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರಸ್ತುತ 6 ರಿಂದ 10 ನೇ ತರಗತಿವರೆಗೆ ಉಚಿತ ಶಿಕ್ಷಣ ನೀಡಲಾಗುತ್ತಿದ್ದು, ಅದನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಪಿಯುಸಿವರೆಗೆ ವಿಸ್ತರಿಸುವ ಉದ್ದೇಶದಿಂದ ಮೇಲ್ದರ್ಜೆಗೇರಿಸಲು ನಿರ್ಧರಿಸಲಾಗಿದೆ ಎಂದಿದ್ದಾರೆ.

ರಾಜ್ಯದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ 530 ವಸತಿ ಶಾಲೆಗಳಲ್ಲಿ ಪಿಯುಸಿವರೆಗೆ ಉಚಿತ ಶಿಕ್ಷಣ ನೀಡಲಾಗುವುದು, ಇದರಿಂದ ವಸತಿ ಶಾಲೆಯಲ್ಲಿ ಕಲಿಯುತ್ತಿರುವ ರಾಜ್ಯದ 40 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.

- Advertisement -
spot_img

Latest News

error: Content is protected !!