Saturday, June 13, 2026
Homeತಾಜಾ ಸುದ್ದಿಬೆಂಗಳೂರಿನಲ್ಲಿ ಸದ್ದು ಮಾಡುತ್ತಿದೆ ಬೌ ಬೌ ಮಾಂಸ; ಪೊಲೀಸರಿಂದ ಪುನೀತ್‌ ಕೆರೆಹಳ್ಳಿ ಬಂಧನ; ಅರೆಸ್ಟ್ ಆಗುತ್ತಿದ್ದಂತೆ...

ಬೆಂಗಳೂರಿನಲ್ಲಿ ಸದ್ದು ಮಾಡುತ್ತಿದೆ ಬೌ ಬೌ ಮಾಂಸ; ಪೊಲೀಸರಿಂದ ಪುನೀತ್‌ ಕೆರೆಹಳ್ಳಿ ಬಂಧನ; ಅರೆಸ್ಟ್ ಆಗುತ್ತಿದ್ದಂತೆ ಅಸ್ವಸ್ಥ

- Advertisement -
- Advertisement -

ಬೆಂಗಳೂರು : ರಾಜಸ್ಥಾನದಿಂದ ಬೆಂಗಳೂರಿಗೆ ರೈಲಿನ ಮೂಲಕ ಕುರಿ ಮಾಂಸದ ಬದಲು ನಾಯಿ ಮಾಂಸ ತಂದು ಮಾರಾಟ ಮಾಡಲಾಗುತ್ತಿದೆ ಎಂಬ ಸುದ್ದಿ ಬಂದ ಹಿನ್ನೆಲೆ ನಿನ್ನೆ ಹಿಂದೂ ಸಂಘಟನೆ ಕಾರ್ಯಕರ್ತರು ಜೈಪುರದಿಂದ ರೈಲು ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣಕ್ಕೆ ಬರುತ್ತಿದ್ದಂತೆ ದಾಳಿ ಮಾಡಿದ್ದರು.

ಎರಡು ಬಾಕ್ಸ್ ಗಳನ್ನು ತೆರೆದು ನೋಡಿದಾಗ ಅದರಲ್ಲಿ ಕುರಿ ಮಾಂಸದ ಬದಲು ನಾಯಿ ಮಾಂಸ ಪತ್ತೆಯಾಗಿತ್ತು. ಈ ವೇಳೆ ಮಾಂಸದ ವ್ಯಾಪಾರಿಗಳು ಹಾಗೂ ಹಿಂದೂ ಕಾರ್ಯಕರ್ತರ ನಡುವೆ ಗಲಾಟೆ ಶುರುವಾಗಿದೆ. ಹಿಂದೂ ಕಾರ್ಯಕರ್ತರ ಮೇಲೆ ಮಾಂಸ ವ್ಯಾಪಾರಿಗಳು ದಾಳಿ ಮಾಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ವೇಳೆ ಹಿಂದೂ ಸಂಘಟನೆ ಮುಖಂಡ ಪುನೀತ್‌ ಕೆರೆಹಳ್ಳಿ ಅವರನ್ನು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಬಂಧಿಸಿದ್ದರು.

ರಾತ್ರಿ ಠಾಣೆಯಲ್ಲಿ ಮಲಗಿದ್ದ ಪುನೀತ್‌ ಕೆರೆಹಳ್ಳಿ ಅವರು ಇಂದು ಮುಂಜಾನೆ 4.45 ರ ಸುಮಾರಿಗೆ ಅಸ್ವಸ್ಥರಾಗಿದ್ದು, ಕೂಡಲೇ ಕೆ.ಸಿ. ಜನರಲ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

- Advertisement -

Latest News

error: Content is protected !!