Monday, May 6, 2024
Homeತಾಜಾ ಸುದ್ದಿಇದ್ರೀಷ್‌ ಪಾಷ ಕೊಲೆ ಪ್ರಕರಣ; ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ಸೇರಿ...

ಇದ್ರೀಷ್‌ ಪಾಷ ಕೊಲೆ ಪ್ರಕರಣ; ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ಸೇರಿ ನಾಲ್ವರ ಬಂಧನ

spot_img
- Advertisement -
- Advertisement -

ನಕಪುರ: ಸಾತನೂರು ಸಮೀಪ ಶುಕ್ರವಾರ ತಡರಾತ್ರಿ ನಡೆದ ಇದ್ರೀಷ್‌ ಪಾಷ (45) ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ಸೇರಿದಂತೆ ನಾಲ್ವರನ್ನು ಪೋಲಿಸರು ಬಂಧಿಸಿದ್ದಾರೆ.

ಘಟನೆ ನಡೆದ ಬಳಿಕ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ತಲೆ ಮರೆಸಿಕೊಂಡಿದ್ದ, ಬಳಿಕ ಪುನೀತ್‌ ತಾನು ಜಾನುವಾರು ವ್ಯಾಪಾರಿ ಇದ್ರೀಸ್ ಪಾಷಾನನ್ನು ಕೊಲೆ ಮಾಡಿಲ್ಲ ಎಂದು ವಿಡಿಯೋ ಬಿಡುಗಡೆ ಮಾಡಿದ್ದ. ಪುನೀತ್ 15 ನಿಮಿಷಗಳ ವೀಡಿಯೊವನ್ನು ಬಿಡುಗಡೆ ಮಾಡಿದ್ದ ಕೂಡ, ಏಪ್ರಿಲ್ 1 ರಂದು ಗೋರಕ್ಷಕರು ಜಾನುವಾರು ವ್ಯಾಪಾರಿಯನ್ನು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಏಪ್ರಿಲ್ 1 ರಂದು ಸಾತನೂರು ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್‌ಐಆರ್ನಲ್ಲಿ ಪುನೀತ್ ಕೆರೆಹಳ್ಳಿಯನ್ನು ಪ್ರಮುಖ ಆರೋಪಿ ಎಂದು ಹೆಸರಿಸಲಾಗಿದೆ.

ಎಪ್ರಿಲ್ 3ರಂದು ‘ಕರ್ನಾಟಕ ಸುದ್ದಿ’ ಎಂಬ ಫೇಸ್ ಬುಕ್ ಪೇಜ್ ನಲ್ಲಿ ಕೆರೆಹಳ್ಳಿ ಅವರು ಕಾರಿನಲ್ಲಿ ಕುಳಿತು ಇದ್ರೀಸ್ ಪಾಷಾನನ್ನು ಕೊಂದಿಲ್ಲ, ಮುಸ್ಲಿಂ ಮತದಾರರ ಮೇಲೆ ಪ್ರಭಾವ ಬೀರಲು ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಸಂಚು ರೂಪಿಸುತ್ತಿದ್ದಾರೆ ಎಂದು ಹೇಳುತ್ತಿರುವ ವೀಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

- Advertisement -
spot_img

Latest News

error: Content is protected !!