Thursday, June 4, 2026
Homeತಾಜಾ ಸುದ್ದಿಪವರ್‌ ಸ್ಟಾರ್‌ ಪುನೀತ್‌ ರಾಜ್‌ ಕುಮಾರ್‌ ನಮ್ಮನ್ನೆಲ್ಲ ಅಗಲಿ ಇಂದಿಗೆ ಒಂದು ವರ್ಷ: ಪರಮಾತ್ಮನನ್ನು ನೆನೆದು...

ಪವರ್‌ ಸ್ಟಾರ್‌ ಪುನೀತ್‌ ರಾಜ್‌ ಕುಮಾರ್‌ ನಮ್ಮನ್ನೆಲ್ಲ ಅಗಲಿ ಇಂದಿಗೆ ಒಂದು ವರ್ಷ: ಪರಮಾತ್ಮನನ್ನು ನೆನೆದು ಕಣ್ಣೀರು ಹಾಕಿದ ಕುಟುಂಬಸ್ಥರು

- Advertisement -
- Advertisement -

ಬೆಂಗಳೂರು: ಕರ್ನಾಟಕ ರತ್ನ, ಪವರ್‌ ಸ್ಟಾರ್‌ ಪುನೀತ್‌ ರಾಜ್‌ ಕುಮಾರ್‌ ನಮ್ಮನ್ನೆಲ್ಲ ಅಗಲಿ ಇಂದಿಗೆ ಒಂದು ವರ್ಷವೇ ಕಳೆದಿದೆ. ಅಪ್ಪು ಇನ್ನಿಲ್ಲ ಅನ್ನೋದನ್ನು ಇಂದಿಗೂ ಅಭಿಮಾನಿಗಳಿಗೆ ಒಪ್ಪಿಕೊಳ್ಳೋಕೆ ಸಾಧ್ಯಾನೇ ಆಗ್ತಿಲ್ಲ. ಪುನೀತ್ ರಾಜ್ ಕುಮಾರ್ ಅವರ ಪುಣ್ಯಸ್ಮರಣೆ ಹಿನ್ನೆಲೆ ಲಕ್ಷಾಂತರ ಸಂಖ್ಯೆಯಲ್ಲಿ ಅಭಿಮಾನಿಗಳು ಇಂದು ಪುನೀತ್ ಸಮಾಧಿ ಬಳಿ ಆಗಮಿಸಿದ್ದರು.

ಇನ್ನು ಕುಟುಂಬಸ್ಥರು ಕೂಡ ಅಪ್ಪು ಸಮಾಧಿ ಬಳಿ ಆಗಮಿಸಿದ್ದರು. ಈ ವೇಳೆ ಅಪ್ಪು ಸಮಾಧಿಗೆ ಕುಟುಂಬದ ಸದಸ್ಯರು ಪೂಜೆ ಸಲ್ಲಿಸಿದರು. ಬೆಂಗಳೂರಿನ ಕಂಠೀವರ ಸ್ಟುಡಿಯೋ ಬಳಿಯಿರುವ ಅಪ್ಪು ಸಮಾಧಿ ಬಳಿ ರಾಘವೇಂದ್ರ ರಾಜ್‌ ಕುಮಾರ್‌, ಶಿವರಾಜ್‌ ಕುಮಾರ್‌, ಅಶ್ವಿನಿ ಪುನೀತ್ ರಾಜ್ ಕುಮಾರ್ , ಗೀತಾ ಶಿವರಾಜ್ ಕುಮಾರ್ , ಯುವ್ ರಾಜ್ ಕುಮಾರ್, ವಿನಯ್ ರಾಜ್ ಕುಮಾರ್ , ಪುನೀತ್‌ ಸಹೋದರಿಯರು ಪುನೀತ್‌ ಪುತ್ರಿ ಸೇರಿದಂತೆ ಕುಟುಂಬದ ಸದಸ್ಯರು ಆಗಮಿಸಿದ್ದರು.ಈ ವೇಳೆ ಪುನೀತ್‌ ರಾಜ್‌ ಕುಮಾರ್‌ ಪತ್ನಿ ಅಶ್ವಿನಿ ಪತಿಯನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತರು. ಕುಟುಂಬಸ್ಥರು ಸಹ ಅಪ್ಪು ನೆನದು ಭಾವುಕರಾದರು.

- Advertisement -

Latest News

error: Content is protected !!