Sunday, May 5, 2024
Homeಕರಾವಳಿಬೆಳ್ತಂಗಡಿ : ಅಕ್ರಮ ಆಸ್ತಿ ಸಂಪಾದನೆ ಆರೋಪ ಸಾಬೀತು: ಆರೋಪಿಗೆ 1.50 ಕೋಟಿ ದಂಡ, ಐದು...

ಬೆಳ್ತಂಗಡಿ : ಅಕ್ರಮ ಆಸ್ತಿ ಸಂಪಾದನೆ ಆರೋಪ ಸಾಬೀತು: ಆರೋಪಿಗೆ 1.50 ಕೋಟಿ ದಂಡ, ಐದು ವರ್ಷ ಜೈಲು ಶಿಕ್ಷೆ ಪ್ರಕಟ

spot_img
- Advertisement -
- Advertisement -

ಮಂಗಳೂರು : ಅಕ್ರಮ ಆಸ್ತಿ ಸಂಪಾದನೆ ಹಿನ್ನಲೆಯಲ್ಲಿ ಬೆಳ್ತಂಗಡಿಯಲ್ಲಿ ವಲಯ ಅರಣ್ಯಾಧಿಕಾರಿಯಾಗಿದ್ದ ಆರೋಪಿಗೆ  ಭಾರಿ ಮೊತ್ತದ ದಂಡ ಹಾಗೂ ಜೈಲು ಶಿಕ್ಷೆಯನ್ನು ನೀಡಿ ಮಂಗಳೂರು ನ್ಯಾಯಾಲಯ ಆದೇಶ ಹೊರಡಿಸಿದೆ.

ಬೆಳ್ತಂಗಡಿ ಅರಣ್ಯಾಧಿಕಾರಿಯವರ ಕಛೇರಿಯಲ್ಲಿ ಕರ್ತವ್ಯದಲ್ಲಿದ್ದ ಮಂಗಳೂರಿನ  ದೇರೆಬೈಲು ನಿವಾಸಿ ವಲಯ ಅರಣ್ಯಾಧಿಕಾರಿಯಾಗಿದ್ದ ಎಸ್.ರಾಘವ ಪಾಟಾಳಿಯವರು ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಆಸ್ತಿಯನ್ನು ಹೊಂದಿರುವ ಬಗ್ಗೆ ಮಂಗಳೂರು ಲೋಕಾಯಕ್ತ ಕಚೇರಿಗೆ ಬಲ್ಲ ಮೂಲಗಳಿಮದ ಮಾಹಿತಿ ಬಂದಿತ್ತು. ಅದರಂತೆ ವಿರುದ್ಧ ಮಂಗಳೂರಿನ ಕರ್ನಾಟಕ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ದಿನಾಂಕ 21-07-2011 ರಂದು ಪ್ರಕರಣ ದಾಖಲಾಗಿತ್ತು.

ಈ ಬಗ್ಗೆ ವಿಚಾರಣೆ ನಡೆಸಿದ 3ನೇ ಹೆಚ್ಚುವರಿ ಜಿಲ್ಲಾ ಸತ್ರ (ವಿಶೇಷ) ನ್ಯಾಯಾಲಯ ಮಂಗಳೂರು ಇದರ ನ್ಯಾಯಾಧೀಶರಾದ ಬಿ.ಬಿ. ಜಕಾತಿ  ಅವರು ಜ. 27 ರಂದು ಅಂತಿಮ ತೀರ್ಪು ಪ್ರಕಟಿಸಿದ್ದು. ತೀರ್ಪಿನಲ್ಲಿ ಆರೋಪಿ.ರಾಘವ ಪಾಟಾಳಿ ಅವರ ವಿರುದ್ಧ ಕಲಂ 13(1)(ಇ) ಜೊತೆಗೆ 13(2) ಭ್ರಷ್ಟಾಚಾರ ತಡೆ ಕಾಯ್ದೆ 1988, ರಂತೆ 05 ವರ್ಷಗಳ ಸಾದಾ ಸಜೆ ಹಾಗೂ ರೂ 1,50,00,000/- (1 ಕೋಟಿ ಐವತ್ತು ಲಕ್ಷ ರೂಪಾಯಿ) ದಂಡ ವಿಧಿಸಿದ್ದು ಆರೋಪಿಯು ದಂಡ ಕಟ್ಟಲು ವಿಫಲರಾದಲ್ಲಿ ಮತ್ತೆ 11 ವರ್ಷಗಳ ಕಾಲ ಸಾದಾ ಸಜೆ ಶಿಕ್ಷೆಯನ್ನು ಆದೇಶಿಸಿ, 295 ಪುಟಗಳ ಸುಧೀರ್ಘ ಅಂತಿಮ ತೀರ್ಪು ನೀಡಿದ್ದಾರೆ.

ಪೊಲೀಸ್‌ ನಿರೀಕ್ಷಕ ಉದಯ ಎಂ.ನಾಯಕ್‌ ದೂರು ದಾಖಲಿಸಿದ್ದರು. ಪೊಲೀಸ್‌ ಉಪಧೀಕ್ಷಕ ವಿಠ್ಠಲ್ ದಾಸ್ ಪೈ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಲೋಕಾಯುಕ್ತ ವಿಶೇಷ ಸಾರ್ವಜನಿಕ ಅಭಿಯೋಜಕ ರವೀಂದ್ರ ಮುನ್ನಿಪಾಡಿ ಸರಕಾರದ ಪರವಾಗಿ ವಾದ ಮಂಡಿಸಿದ್ದರು.

- Advertisement -
spot_img

Latest News

error: Content is protected !!