ಬೆಂಗಳೂರು: 12 ವರ್ಷಗಳ ಹಿಂದೆ ಸುಳ್ಯದಲ್ಲಿ ನಡೆದ ಪ್ರಾಂಶುಪಾಲ ಎ.ಎಸ್ ರಾಮಕೃಷ್ಣ ಕೊಲೆ ಪ್ರಕರಣಕ್ಕೆಸಂಬಂಧಿಸಿದಂತೆ ಡಾ.ರೇಣುಕಾಪ್ರಸಾದ್ ಸೇರಿ 6 ಜನ ದೋಷಿಗಳೆಂದು ತೀರ್ಪು ನೀಡಿದ ಹೈಕೋರ್ಟ್ ತೀರ್ಪು ನೀಡಿದೆ.
ಪ್ರಕರಣದಲ್ಲಿ ರೇಣುಕಾ ಪ್ರಸಾದ್ ಸೇರಿದಂತೆ ಏಳು ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿ ಪುತ್ತೂರಿನ 5ನೇ ಹೆಚ್ಚುವರಿ ಸಿವಿಲ್ ಮತ್ತು ಸತ್ರ ನ್ಯಾಯಾಲಯ ಈ ಹಿಂದೆ ಆದೇಶ ಹೊರಡಿಸಿತ್ತು. ಈ ಆದೇಶವನ್ನು ರದ್ದು ಮಾಡಬೇಕು, ಇವರೇ ಆರೋಪಿಗಳಾಗಿದ್ದು ಅವರಿಗೆ ಶಿಕ್ಷೆ ವಿಧಿಸಬೇಕು ಎಂದು ಕೋರಿ ರಾಜ್ಯ ಸರ್ಕಾರದ ಪರವಾಗಿ ಪುತ್ತೂರು ಉಪ ವಿಭಾಗದ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿಯನ್ನು ಹೈಕೋರ್ಟ್ ಪುರಸ್ಕರಿಸಿದೆ. ನ್ಯಾಯಮೂರ್ತಿಗಳಾದ ಶ್ರೀನಿವಾಸ್ ಹರೀಶ್ ಕುಮಾರ್ ಮತ್ತು ಜಿ ಬಸವರಾಜ ಅವರ ನೇತೃತ್ವದ ವಿಭಾಗೀಯ ಪೀಠ ಪುರಸ್ಕರಿಸಿದೆ.
ಪ್ರಕರಣದ ಒಟ್ಟು ಏಳು ಮಂದಿ ಆರೋಪಿಗಳ ಪೈಕಿ ಡಾ. ರೇಣುಕಾ ಪ್ರಸಾದ್, ಮನೋಜ್ ರೈ, ಎಚ್ ಆರ್ ನಾಗೇಶ್, ವಾಮನ ಪೂಜಾರಿ, ಶರಣ್ ಪೂಜಾರಿ ಮತ್ತು ಶಂಕರ ಅವರನ್ನು ಮೃತ ಎ ಎಸ್ ರಾಮಕೃಷ್ಣ ಅವರ ಹತ್ಯೆ ಮತ್ತು ಕೊಲೆಗೆ ಒಳಸಂಚು ರೂಪಿಸಿದ ಪ್ರಕರಣದಲ್ಲಿ ದೋಷಿಗಳು ಎಂದು ತೀರ್ಮಾನಿಸಿದೆ. ಆದರೆ, ಏಳನೇ ಆರೋಪಿಯಾಗಿದ್ದ ಎಚ್ ಯು ನಾಗೇಶ್ ಕುಮಾರ್ ಅವರನ್ನು ಖುಲಾಸೆಗೊಳಿಸಿದ ಅಧೀನ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಇದೇ ವೇಳೆ ಮಾನ್ಯ ಮಾಡಿದೆ. ಅಲ್ಲದೆ, ದೋಷಿಗಳಿಗೆ ಶಿಕ್ಷೆ ಪ್ರಮಾಣ ನಿಗದಿಪಡಿಸುವ ಕುರಿತು ಅಕ್ಟೋಬರ್ 5ರಂದು ವಿಚಾರಣೆ ನಡೆಸುವುದಾಗಿ ಪೀಠ ತಿಳಿಸಿದೆ.
ಕುರುಂಜಿ ವೆಂಕಟರಮಣ ಗೌಡ ಅವರು ಕೆವಿಜಿ ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ಸ್ಪ್ಲಿಂಟರ್ ಇನ್‌ಸ್ಟಿಟ್ಯೂಷನ್ಸ್ ಸಂಸ್ಥಾಪಕರಾಗಿದ್ದರು. ವಯಸ್ಸಾದ ಮತ್ತು ಅನಾರೋಗ್ಯ ಕಾಡಿದ ಕಾರಣ ಶೈಕ್ಷಣಿಕ ಸಂಸ್ಥೆಗಳ ನಿರ್ವಹಣೆ ಹೊಣೆಯನ್ನು ಅವರು ಹಿರಿಯ ಪುತ್ರ ಕೆ ವಿ ಚಿದಾನಂದ ಮತ್ತು ಕಿರಿಯ ಪುತ್ರ ರೇಣುಕಾ ಪ್ರಸಾದ್ ಅವರಿಗೆ ವಿಭಜನೆ ಮಾಡಿ ಕೊಟ್ಟಿದ್ದರು. ಈ ವೇಳೆ ಎ.ಎಸ್ ರಾಮಕೃಷ್ಣ ಎಂಬವರು ಕೆವಿಜಿ ಪಾಲಿಟೆಕ್ನಿಕ್ ಕಾಲೇಜು ಪ್ರಿನ್ಸಿಪಾಲ್ಆಗಿ ಕಾರ್ಯ ನಿರ್ವಹಿಸುತ್ತಿದ್ದರು.
ಆಸ್ತಿ, ಶೈಕ್ಷಣಿಕ ಸಂಸ್ಥೆಗಳ ಜವಬ್ದಾರಿ ಯ ವಿಭಜನೆಯನ್ನು ರಾಮಕೃಷ್ಣ ಅವರ ಸಲಹೆ ಮೇರೆಗೆ ಮಾಡಲಾಗಿದೆ ಎಂದು ಭಾವಿಸಿದ್ದ ರೇಣುಕಾ ಪ್ರಸಾದ್, ಚಿದಾನಂದ ಅವರ ಪರವಾಗಿ ಕೆವಿಜಿ ಮೆಡಿಕಲ್ ಕಾಲೇಜು ವ್ಯವಹಾರಗಳನ್ನು ಸಹ ರಾಮಕೃಷ್ಣ ಅವರು ನೋಡಿಕೊಳ್ಳುತ್ತಿದ್ದಾರೆ ಎಂಬ ದ್ವೇಷದಿಂದ ರಾಮಕೃಷ್ಣ ಕೊಲೆಗೆ ಸುಪಾರಿ ನೀಡಿದ್ದರು.
2011ರ ಏಪ್ರಿಲ್ 28ರಂದು ಬೆಳಗ್ಗೆ 7.45ರ ವೇಳೆಯಲ್ಲಿ ಅಂಬಟೆಡ್ಕ ಬಳಿಯ ಶ್ರೀಕೃಷ್ಣ ಆಯುರ್ವೇದಿಕ್ ಥೆರಪಿ ಕ್ಲಿನಿಕ್ ರಸ್ತೆಯಲ್ಲಿ ನಡೆದುಹೋಗುತ್ತಿದ್ದ ರಾಮಕೃಷ್ಣ ಅವರ ಮೇಲೆ ಆರೋಪಿಗಳು ದಾಳಿ ನಡೆಸಿ, ಕೊಚ್ಚಿ ಕೊಲೆ ಮಾಡಿದ್ದರು. ಪ್ರಕರಣ ಸಂಬಂಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದಲ್ಲಿ ಡಾ.ರೇಣುಕಾ ಪ್ರಸಾದ್ ಮೊದಲ ಆರೋಪಿಯಾಗಿದ್ದು ಒಟ್ಟು ಏಳು ಆರೋಪಿಗಳಿದ್ದರು. ಸಾಕ್ಷ್ಯಾಧಾರಗಳ ಕೊರತೆಯಿಂದ ಅವರೆಲ್ಲರನ್ನೂ ಖುಲಾಸೆಗೊಳಿಸಿ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು 2016ರ ಅಕ್ಟೋಬರ್ 21ರಂದು ಆದೇಶಿಸಿತ್ತು.
ಈ ಆದೇಶ ಪ್ರಶ್ನಿಸಿ ಸರ್ಕಾರ 2017ರಲ್ಲಿ ಹೈಕೋರ್ಟ್‌ಗೆ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಿತ್ತು. ಇದೀಗ ರೇಣುಕಾಪ್ರಸಾದ್ ಹಾಗೂ ಇತರೆ ಐವರು ಆರೊಪಿಗಳು ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವುದು ಸಾಕ್ಷ್ಯಾಧಾರಗಳ ಸಮೇತ ದೃಢಪಟ್ಟಿದೆ ಎಂದು ತೀರ್ಮಾನಿಸಿರುವ ಹೈಕೋರ್ಟ್, ಎಲ್ಲರನ್ನೂ ಕೊಲೆ ಮತ್ತು ಅಪರಾಧಿಕ ಒಳಸಂಚಿನ ಕೃತ್ಯದಲ್ಲಿ ದೋಷಿ ಎಂದು ತೀರ್ಮಾನಿಸಿದೆ.
ಪ್ರಕರಣದ ಒಟ್ಟು ಏಳು ಮಂದಿ ಆರೋಪಿಗಳ ಪೈಕಿ ಡಾ. ರೇಣುಕಾ ಪ್ರಸಾದ್, ಮನೋಜ್ ರೈ, ಎಚ್ ಆರ್ ನಾಗೇಶ್, ವಾಮನ ಪೂಜಾರಿ, ಶರಣ್ ಪೂಜಾರಿ ಮತ್ತು ಶಂಕರ ಅವ ಮೃತ ಎ ಎಸ್ ರಾಮಕೃಷ್ಣ ಅವರ ಹತ್ಯೆ ಮತ್ತು ಕೊಲೆಗೆ ಒಳಸಂಚು ರೂಪಿಸಿದ ಪ್ರಕರಣದಲ್ಲಿ ದೋಷಿಗಳು ಎಂದು ಇ ತೀರ್ಮಾನಿಸಿದೆ. ಆದರೆ, ಏಳನೇ ಆರೋಪಿಯಾಗಿದ್ದ ಎಚ್ ಯು ನಾಗೇಶ್ ಕುಮಾರ್ ಅವರನ್ನು ಖುಲಾಸೆಗೊಳಿಸಿದ ಅಧೀನ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಇದೇ ವೇಳೆ ಮಾನ್ಯ ಮಾಡಿದೆ. ಅಲ್ಲದೆ, ದೋಷಿಗಳಿಗೆ ಶಿಕ್ಷೆ ಪ್ರಮಾಣ ನಿಗದಿಪಡಿಸುವ ಕುರಿತು ಅಕ್ಟೋಬರ್ 5ರಂದು ವಿಚಾರಣೆ ನಡೆಸುವುದಾಗಿ ಪೀಠ ತಿಳಿಸಿದೆ.


