- Advertisement -
- Advertisement -
ಚೆನ್ನೈ : ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಅಂತ್ಯ ಸಂಸ್ಕಾರಕ್ಕೆ ಅಡ್ಡಿ ಮಾಡಿದರೆ ತಮಿಳುನಾಡಿನಲ್ಲಿ 3 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ.
ಕೊರೊನಾ ಸೋಂಕಿನಿಂದ ಮೃತಪಟ್ಟ ರೋಗಿಗಳ ಅಂತ್ಯಸಂಸ್ಕಾರ ಅಥವಾ ಹೂಳಲು ಜನ ವಿರೋಧ ವ್ಯಕ್ತಪಡಿಸಿದರೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಲು ತಮಿಳುನಾಡು ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದೆ.
ಮಾರಣಾಂತಿಕ ಕೊರೊನಾ ವೈರಸ್ ನಿಂದ ಮೃತಪಟ್ಟ ವ್ಯಕ್ತಿಗಳ ಅಂತ್ಯಸಂಸ್ಕಾರಕ್ಕೆ ಅಡ್ಡಿಪಡಿಸುವುದು ಕ್ರಿಮಿನಲ್ ಅಪರಾಧ ಎಂದು ಸುಗ್ರೀವಾಜ್ಞೆಯಲ್ಲಿ ಉಲ್ಲೇಖಿಸಲಾಗಿದೆ. ಸಾರ್ವಜನಿಕ ಕಾಯ್ದೆ 1939 ರ ಸೆಕ್ಷನ್ 74 ರ ಪ್ರಕಾರ ಅಡ್ಡಿಪಡಿಸಿದರೆ ಕನಿಷ್ಟ 1 ವರ್ಷ ಜೈಲು ಅಥವಾ ಗರಿಷ್ಟ 3 ವರ್ಷ ಜೈಲು ಶಿಕ್ಷೆ ವಿಧಿಸಬಹುದಾಗಿದೆ.
- Advertisement -