Wednesday, June 3, 2026
Homeಕರಾವಳಿಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ ಪ್ರಕರಣ; ಆರೋಪಿ ಮದ್ರಸ...

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ ಪ್ರಕರಣ; ಆರೋಪಿ ಮದ್ರಸ ಶಿಕ್ಷಕನಿಗೆ ಶಿಕ್ಷೆ ವಿಧಿಸಿ ಆದೇಶ ನೀಡಿದ ಬೆಳ್ತಂಗಡಿ ಕೋರ್ಟ್

- Advertisement -
- Advertisement -

ಬೆಳ್ತಂಗಡಿ; ಧರ್ಮಸ್ಥಳ-ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಉಪ್ಪಿನಂಗಡಿ ಸಮೀಪದ ಇಳಂತಿಲ ಕಡವಿನಬಾಗಿಲು ಎಂಬಲ್ಲಿ ಹೋಗುತ್ತಿದ್ದ ವೇಳೆ ಅದೇ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ನ್ಯಾಯಾಲಯ ಶಿಕ್ಷೆ ವಿಧಿಸಿ ಆದೇಶ ನೀಡಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಮೂಲದ ಮದ್ರಸ ಶಾಲೆಯ ಶಿಕ್ಷಕ ಮುಹಮ್ಮದ್ ಸೈಫುಲ್ಲಾ ಎಂಬಾತನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರಂತೆ ತನಿಖೆ ಪೂರ್ಣಗೊಳಿಸಿದ ಬಳಿಕ ಆರೋಪಿ ವಿರುದ್ಧ ಪೊಲೀಸರು ಬೆಳ್ತಂಗಡಿ ಪ್ರಧಾನ ಹಿರಿಯ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶ ದೇವರಾಜ ಹೆಚ್.ಎಂ. ಅವರು ಆರೋಪಿ ಮುಹಮ್ಮದ್ ಸೈಫುಲ್ಲಾ ಅಪರಾಧಿ ಎಂದು ಘೋಷಿಸಿದ್ದು, ಆತನಿಗೆ 6 ತಿಂಗಳು ಜೈಲು ಶಿಕ್ಷೆ ಮತ್ತು 5 ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ.

ಪ್ರಾಸಿಕ್ಯೂಶನ್ ಪರವಾಗಿ ಬೆಳ್ತಂಗಡಿ ನ್ಯಾಯಾಲಯದ ಸಹಾಯಕ ಸರಕಾರಿ ಅಭಿಯೋಜಕರಾಗಿರುವ ಪುತ್ತೂರು ಬೊಳುವಾರು ನಿವಾಸಿ ದಿವ್ಯರಾಜ್ ಹೆಗ್ಡೆ ವಾದಿಸಿದ್ದರು

- Advertisement -

Latest News

error: Content is protected !!