Thursday, June 4, 2026
Homeಕರಾವಳಿಸುಳ್ಯದಲ್ಲಿ ಮಾನಸಿಕ ಅಸ್ವಸ್ಥೆಯ ಅತ್ಯಾಚಾರ ಪ್ರಕರಣ : ಆರೋಪಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿ...

ಸುಳ್ಯದಲ್ಲಿ ಮಾನಸಿಕ ಅಸ್ವಸ್ಥೆಯ ಅತ್ಯಾಚಾರ ಪ್ರಕರಣ : ಆರೋಪಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು

- Advertisement -
- Advertisement -

ಸುಳ್ಯ: ಇಲ್ಲಿನ ಬಾಳಿಲ ಗ್ರಾಮದ ಕಾಂಚೋಡು ಎಂಬಲ್ಲಿ ಮಾನಸಿಕ ಅಸ್ವಸ್ಥೆಯೊಬ್ಬರ ಮನೆಗೆ ಅಕ್ರಮವಾಗಿ ಪ್ರವೇಶಿಸಿ ಆಕೆಯ ಮೇಲೆ ಅತ್ಯಾಚಾರವೆಸಗಿ, ಬಳಿಕ ಜೀವ ಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಳಂಜ ಗ್ರಾಮದ ಕೋಟೆ ಮುಂಡುಗಾರು ನಿವಾಸಿ ಸುಬ್ರಮಣ್ಯ ಎಂಬಾತನಿಗೆ ಎರಡು ವರ್ಷ ಜೈಲು ಶಿಕ್ಷೆ, 10 ಸಾವಿರ ದಂಡ ವಿಧಿಸಿ ಕೋರ್ಟ್ ತೀರ್ಪು ನೀಡಿದೆ.

2015 ಜನವರಿ 11 ರಂದು ಕಾಂಚೋಡಿನ ಮಾನಸಿಕ ಅಸ್ವಸ್ಥೆಯ ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಗೆ ನುಗ್ಗಿದ ಆರೋಪಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದ. ಬಳಿಕ ಯಾರಿಗೂ ಹೇಳದಂತೆ ಜೀವಬೆದರಿಕೆ ಒಡ್ಡಿದ್ದ. ಈ ಬಗ್ಗೆ ಸಂತ್ರಸ್ತೆಯ ಪೋಷಕರರು ಸುಳ್ಯ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸೋಮಶೇಖರ ಎ ಅವರು ಆರೋಪಿ ಇದೀಗ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದ್ದಾರೆ.

- Advertisement -

Latest News

error: Content is protected !!