Saturday, August 29, 2026
Homeಕರಾವಳಿಉಡುಪಿಉಡುಪಿ: ಅಜಾಗರೂಕತೆಯ ಬೈಕ್ ಚಲಾಯಿಸಿ ವ್ಯಕ್ತಿ ಸಾವು ಪ್ರಕರಣ; ಆರೋಪಿಗೆ ಶಿಕ್ಷೆ ವಿಧಿಸಿದ ಕೋರ್ಟ್

ಉಡುಪಿ: ಅಜಾಗರೂಕತೆಯ ಬೈಕ್ ಚಲಾಯಿಸಿ ವ್ಯಕ್ತಿ ಸಾವು ಪ್ರಕರಣ; ಆರೋಪಿಗೆ ಶಿಕ್ಷೆ ವಿಧಿಸಿದ ಕೋರ್ಟ್

- Advertisement -
- Advertisement -

ಉಡುಪಿ: ಅಜಾಗರೂಕತೆಯಿಂದ ಬೈಕ್ ಚಲಾಯಿಸಿ, ರಸ್ತೆ ಬದಿ ನಡೆದುಕೊಂಡ ಹೋಗುತ್ತಿದ್ದ ಪಾದಚಾರಿಯ ಸಾವಿಗೆ ಕಾರಣವಾದ ಆರೋಪಿಗೆ ನಗರದ 1 ನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.

2018 ಸೆಪ್ಟಂಬರ್ 4 ರಂದುರಂದು ಸಂಜೆ 4:45 ರ ಸುಮಾರಿಗೆ ಉಡುಪಿ ತಾಲೂಕು ಉದ್ಯಾವರ ಕೊಪ್ಲದ ನಿವಾಸಿ ದರ್ಶನ್‌ ಎಂಬಾತನು ಮಣಿಪಾಲ-ಉಡುಪಿ ರಾ.ಹೆ.  ಏಕಮುಖ ಸಂಚಾರ ರಸ್ತೆಯಲ್ಲಿ ಅಜಾಗರೂಕತೆಯಿಂದ ಬೈಕನ್ನು ಚಲಾಯಿಸಿಕೊಂಡು ಬಂದು ಶಿವಳ್ಳಿ ಗ್ರಾಮದ ಎಂ.ಜಿ.ಎಂ. ಕಾಲೇಜಿನ ಡಾ.ಟಿ.ಎಂ.ಎ.ಪೈ ಸೈನ್ಸ್ ಮಂದಿರದ ಬಳಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಸಿದ್ದೇಶ್ವರಪ್ಪ ಎಂಬುವರಿಗೆ ಡಿಕ್ಕಿ  ಹೊಡೆದಿದ್ದು, ಪರಿಣಾಮವಾಗಿ, ಅವರು ರಸ್ತೆಗೆ ಬಿದ್ದು, ತಲೆಗೆ ತೀವ್ರ ಸ್ವರೂಪದ ಗಾಯವಾಗಿ ಮೃತಪಟ್ಟಿರುವ ಹಿನ್ನೆಲೆ, ಉಡುಪಿ ಸಂಚಾರ ಠಾಣೆಯ ಪೊಲೀಸ್ ವೃತ್ತ ನಿರೀಕ್ಷಕರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆದುಆರೋಪ ಸಾಬೀತಾದ ಹಿನ್ನೆಲೆ 1ನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶ ಶ್ಯಾಮ್ ಪ್ರಕಾಶ್‌ ಅವರುಆರೋಪಿ ದರ್ಶನ್‌ ಗೆ 2 ವರ್ಷಕಾರಾಗೃಹ ವಾಸ ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಿ, ತೀರ್ಪು ನೀಡಿರುತ್ತಾರೆ. ಸರಕಾರದ ಪರವಾಗಿ ಸಹಾಯಕ ಸರ್ಕಾರಿಅಭಿಯೋಜಕಿ ಮೋಹಿನಿ ಕೆ. ವಾದ ಮಂಡಿಸಿರುತ್ತಾರೆ.

- Advertisement -

Latest News

error: Content is protected !!