Saturday, May 25, 2024
Homeತಾಜಾ ಸುದ್ದಿನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಪುನೀತ್ ರಾಜ್ ಕುಮಾರ್ ಉಪಗ್ರಹ ಉಡಾವಣೆ

ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಪುನೀತ್ ರಾಜ್ ಕುಮಾರ್ ಉಪಗ್ರಹ ಉಡಾವಣೆ

spot_img
- Advertisement -
- Advertisement -

ಬೆಂಗಳೂರು: ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಪುನೀತ್ ರಾಜ್ ಕುಮಾರ್ ಉಪಗ್ರಹ ನಭಕ್ಕೆ ನೆಗೆಯಲಿದೆ.

ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಸರಕಾರಿ ಶಾಲಾ ವಿದ್ಯಾರ್ಥಿಗಳೇ ನಿರ್ಮಿಸುತ್ತಿರುವ ಪುನೀತ್’ ಉಪಗ್ರಹ ಇದಾಗಿದೆ.

ನವೆಂಬರ್ 15 ರಿಂದ ಡಿಸೆಂಬರ್ 31ರ ನಡುವೆ ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಉಪಗ್ರಹ ಉಡಾವಣೆಯಾಗಲಿದ್ದು, ಶ್ರೀಹರಿಕೋಟಾಕ್ಕೆ ಒಂದು ಸಾವಿರ ವಿದ್ಯಾರ್ಥಿಗಳು ತೆರಳಲಿದ್ದಾರೆ.

ಶಾಲಾ ಮಕ್ಕಳಲ್ಲಿ ವೈಜ್ಞಾನಿಕ ಕುತೂಹಲ ಮತ್ತು ಆಸಕ್ತಿ ಬೆಳೆಸಲು ಪ್ರೌಢಶಾಲಾ ಮತ್ತು ಪದವಿಪೂರ್ವ ವಿದ್ಯಾರ್ಥಿಗಳಿಗೆ ಜಿಲ್ಲೆ, ವಿಭಾಗೀಯ ಮತ್ತು ರಾಜ್ಯ ಮಟ್ಟದ ಸ್ಪರ್ಧೆಗಳ ಆಯೋಜನೆ ಮಾಡಲಾಗುತ್ತಿದ್ದು, ಇದರಲ್ಲಿ ಅಂತಿಮವಾಗಿ 1 ಸಾವಿರ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಉಪಗ್ರಹ ಉಡಾವಣೆ ಕಾರ್ಯಕ್ರಮಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟಾಕ್ಕೆ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಕರೆದೊಯ್ಯಲಿದೆ.

ಆಜಾದಿ ಕಾ ಅಮೃತಮಹೋತ್ಸವದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಂದಲೇ 75 ಉಪಗ್ರಹಗಳನ್ನು ಅಭಿವೃದ್ಧಿ ಪಡಿಸುವ ಯೋಜನೆಯನ್ನು ಪ್ರಧಾನಿ ನರೇಂದ್ರ‌ ಮೋದಿ ಘೋಷಿಸಿದ್ದರು.

ಬೆಂಗಳೂರು ವಲಯದ ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಂದ ಕೆಜಿಎಸ್3ಸ್ಯಾಟ್ ಉಪಗ್ರಹ 1.90 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು, ಇದಕ್ಕಾಗಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಸರಕಾರಿ ಪ್ರೌಢಶಾಲೆಯಲ್ಲಿ ಉಪಗ್ರಹ ಅಭಿವೃದ್ಧಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.

ದಿ. ನಟ ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ಈ ಉಪಗ್ರಹಕ್ಕೆ ಪುನೀತ್ ಹೆಸರು ಇಡಲಾಗಿದ್ದು,
ಪ್ರಧಾನಿ ಕಾರ್ಯಕ್ರಮದಡಿ ಉಡಾವಣೆಗೊಳ್ಳುತ್ತಿರುವ ದೇಶದ ಪ್ರಥಮ ಉಪಗ್ರಹ ಇದಾಗಲಿದೆ.

- Advertisement -
spot_img

Latest News

error: Content is protected !!