Friday, June 5, 2026
Homeಕರಾವಳಿಪುಂಜಾಲಕಟ್ಟೆ: ಮಗನನ್ನು ಕೊಂದು ತಂದೆ ಆತ್ಮಹತ್ಯೆಗೆ ಶರಣು

ಪುಂಜಾಲಕಟ್ಟೆ: ಮಗನನ್ನು ಕೊಂದು ತಂದೆ ಆತ್ಮಹತ್ಯೆಗೆ ಶರಣು

- Advertisement -
- Advertisement -

ಬಂಟ್ವಾಳ: ತಂದೆಯೇ ಸ್ವಂತ ಮಗನನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿ‌ ನೇಣು ಬಿಗಿದುಕೊಂಡು ಮನೆಯೊಳಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆ ‌ಯಲ್ಲಿ ನಡೆದಿದೆ.

ಪುಂಜಾಲಕಟ್ಟೆ ಸರಕಾರಿ ಆಸ್ಪತ್ರೆಯ ಸಮೀಪ ಭಜನಾ ಮಂದಿರದ ಬಳಿ ನಿವಾಸಿ ಬಾಬು ನಾಯ್ಕ ( 58) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಆರೋಪಿ ತಂದೆ. 9ನೇ ತರಗತಿಯಲ್ಲಿ ಓದುತ್ತಿರುವ ಸಾತ್ವಿಕ ( 15) ಕೊಲೆಯಾದ ಯುವಕ.

ಕುಡಿತದ ಚಟ ಹೊಂದಿದ್ದ ಬಾಬು ನಾಯ್ಕ್ ಅವರು ಕೆಲ ದಿನಗಳಿಂದ ಮನೆಯಲ್ಲಿ ಮಗನೊಂದಿಗೆ ಕ್ಷುಲ್ಲಕ ಕಾರಣಕ್ಕಾಗಿ ಗಲಾಟೆ ಮಾಡುತ್ತಿದ್ದ ಎಂದು ಸ್ಥಳೀಯ ರು ತಿಳಿಸಿದ್ದಾರೆ. ಬಾಬು ನಾಯ್ಕ್ ಅವರ ಪತ್ನಿ ಕ್ಯಾಶ್ಯೂ ಪ್ಯಾಕ್ಟರಿಗೆ ಕೆಲಸಕ್ಕೆ ತೆರಳಿದ್ದ ವೇಳೆ
ಇಂದು ಮಧ್ಯಾಹ್ನ ಗಲಾಟೆ ಮಾಡಿದ್ದು ಬಳಿಕ ಮಗ ಸಾತ್ವಿಕ ನನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ್ದಾನೆ.

ಕೊಲೆ ಮಾಡಿದ ಬಳಿಕ ಆತನು ಅಲ್ಲೇ ಮನೆಯ ಪಕ್ಕಾಸಿಗೆ ಹಗ್ಗ ದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸುದ್ದಿ ತಿಳಿದು ಜಿ.ಪಂ.ಸದಸ್ಯ ಎಂ.ತುಂಗಪ್ಪ ಬಂಗೇರ ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ದ ಬಗ್ಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪುಂಜಾಲಕಟ್ಟೆ ಎಸ್.ಐ.ಸೌಮ್ಯ ಸ್ಥಳದಲ್ಲಿದ್ದು ಪ್ರಕರಣ ದಾಖಲಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

- Advertisement -

Latest News

error: Content is protected !!