Monday, June 8, 2026
Homeತಾಜಾ ಸುದ್ದಿಪುರುಷೋತ್ತಮ ಬಿಳಿಮಲೆಯಿಂದ ಹಿಂದೂ ಸಮಾಜಕ್ಕೆ ಅವಮಾನ: ಕಿಡಿಕಾರಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

ಪುರುಷೋತ್ತಮ ಬಿಳಿಮಲೆಯಿಂದ ಹಿಂದೂ ಸಮಾಜಕ್ಕೆ ಅವಮಾನ: ಕಿಡಿಕಾರಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

- Advertisement -
- Advertisement -

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು, ಯಕ್ಷಗಾನ ಕಲಾವಿದರಲ್ಲಿ ಅನೇಕರು ಸಲಿಂಗ ಕಾಮಿಗಳಿದ್ದಾರೆ ಎನ್ನುವ ಹೇಳಿಕೆ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಕಿಡಿ ಕಾರಿದ್ದಾರೆ.

ಬಿಳಿಮಲೆಯವರು ಯಕ್ಷಗಾನ ಕಲಾವಿದರಿಗೆ ಮಾತ್ರವಲ್ಲ,ಕರಾವಳಿ ಭಾಗಕ್ಕೆ ಮಾತ್ರವಲ್ಲ ಹಿಂದೂ ಸಮಾಜಕ್ಕೆ ಅವಮಾನ ಮಾಡಿದ್ದಾರೆ ಎಂದಿದ್ದಾರೆ.

ಪುರುಷೋತ್ತಮ ಅವರ ಹೇಳಿಕೆಯು ಕಾಂಗ್ರೆಸ್ ಪಕ್ಷದ ಮನಸ್ಥಿತಿ ಸೇರಿದೆ. ಬಿಳಿಮಲೆಯವರಿಗೆ ಕರಾವಳಿಯ ಕಲೆ, ಸಂಸ್ಕೃತಿ ಮತ್ತು ಪರಂಪರೆ ಕುರಿತಾಗಿ ಕಿಂಚಿತ್ ಗೌರವವಿದ್ದರೆ ಈ ಹೇಳಿಕೆ ನೀಡುತ್ತಿರಲಿಲ್ಲ. ಹಿಂದೂ ಸಮಾಜಕ್ಕೆ ಅಪಮಾನವಾಗಿದ್ದು, ಬಿಜೆಪಿ ಮಾತ್ರವಲ್ಲ, ಪಕ್ಷಾತೀತವಾಗಿ ಹೋರಾಟ ಮಾಡಬೇಕಾಗುತ್ತದೆ. ರಾಜ್ಯ ಸರ್ಕಾರ ತತ್ ಕ್ಷಣ ಹುದ್ದೆಯಿಂದ ಕಿತ್ತು ಬಿಸಾಕಬೇಕು, ಎಂದು ಒತ್ತಾಯಿಸಿದ್ದಾರೆ.

- Advertisement -

Latest News

error: Content is protected !!