Monday, March 17, 2025
Homeತಾಜಾ ಸುದ್ದಿಸನ್ಯಾಸ ದೀಕ್ಷೆ ಸ್ವೀಕರಿಸಿದ ಮಾಜಿ ಸಚಿವ ಪುಟ್ಟಸ್ವಾಮಿ :  ಇನ್ಮುಂದೆ ಶ್ರೀ ಪೂರ್ಣಾನಂದ ಪುರಿ ಸ್ವಾಮಿಗಳು

ಸನ್ಯಾಸ ದೀಕ್ಷೆ ಸ್ವೀಕರಿಸಿದ ಮಾಜಿ ಸಚಿವ ಪುಟ್ಟಸ್ವಾಮಿ :  ಇನ್ಮುಂದೆ ಶ್ರೀ ಪೂರ್ಣಾನಂದ ಪುರಿ ಸ್ವಾಮಿಗಳು

spot_img
- Advertisement -
- Advertisement -

ಬೆಂಗಳೂರು: ಮಾಜಿ ಸಚಿವ ಬಿ.ಜೆ. ಪುಟ್ಟಸ್ವಾಮಿ ಅವರು ಶುಕ್ರವಾರ ಸನ್ಯಾಸ ದೀಕ್ಷೆ ಸ್ವೀಕರಿಸಿದ್ದಾರೆ. ಪುಟ್ಟಸ್ವಾಮಿ ಅವರಿಗೆ ಶ್ರೀ ಪೂರ್ಣಾನಂದ ಪುರಿ ಸ್ವಾಮಿಗಳೆಂದು ನಾಮಕರಣ ಮಾಡಿ ಕೈಲಾಸ ಆಶ್ರಮ ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ ಜಯೇಂದ್ರಪುರಿ ಮಹಾಸ್ವಾಮಿಗಳು ಸನ್ಯಾಸ ದೀಕ್ಷೆ ನೀಡಿದರು.

ಮೇ 8ರಂದು ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿರುವ ಶ್ರೀ ಕ್ಷೇತ್ರ ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನ ಮಠಕ್ಕೆ ತೆರಳಲಿದ್ದು, ಮೇ 15ರಂದು ಪ್ರಥಮ ಪೀಠಾಧಿಪತಿಯಾಗಿ ಶ್ರೀ ಪೂರ್ಣಾನಂದ ಪುರಿ ಸ್ವಾಮಿಗಳು ಅಲಂಕೃತಗೊಳ್ಳಲಿದ್ದಾರೆ.

ಪಟ್ಟಾಭಿಷೇಕ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ, ಮಾಜಿ ಸಿಎಂ ಎಸ್​.ಎಂ. ಕೃಷ್ಣ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​, ಮಾಜಿ ಸಿಎಂ ಎಚ್​.ಡಿ ಕುಮಾರಸ್ವಾಮಿ ಸೇರಿ ಹಲವು ಸಚಿವರು ಭಾಗವಹಿಸಲಿದ್ದಾರೆ. 20 ಮಠಾಧೀಶರು ದಿವ್ಯ ಸಾನಿಧ್ಯ ವಹಿಸಿಲಿದ್ದಾರೆ.

ಬಿ.ಜೆ.ಪುಟ್ಟಸ್ವಾಮಿ ಅವರು ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಏ.30ರಂದು ರಾಜೀನಾಮೆ ನೀಡಿದ್ದರು. ನಾನು ಸಮಾಜ ಸುಧಾರಣಾ ಸ್ವಾಮೀಜಿಯಾಗಿ ದೀಕ್ಷೆ ಪಡೆಯುವೆ ಎಂದು ಈ ಹಿಂದೆ ಹೇಳಿದ್ದರು.

- Advertisement -
spot_img

Latest News

error: Content is protected !!