- Advertisement -
- Advertisement -
ಪುತ್ತೂರು: ಜಿಮ್ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕಾಲೇಜು ವಿದ್ಯಾರ್ಥಿಯೊಬ್ಬ ಏಕಾಏಕಿ ಕುಸಿದು ಬಿದ್ದು ಮೃತಪಟ್ಟ ದಾರುಣ ಘಟನೆ ಶನಿವಾರ ಅಪರಾಹ್ನ ಪುತ್ತೂರಿನಲ್ಲಿ ನಡೆದಿದೆ.
ಆರ್ಯಾಪು ಗ್ರಾಮದ ಕುಂಜೂರುಪಂಜ ನಿವಾಸಿ ರಮೇಶ್ ರೈ ಮತ್ತು ಯಶೋಧಾ ದಂಪತಿಯ ಪುತ್ರ ಶಮಿಕ್ ರೈ (20) ಮೃತಪಟ್ಟ ಯುವಕ. ಪುತ್ತೂರಿನ ಖಾಸಗಿ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆಯುತ್ತಿದ್ದ ಈ ಪ್ರತಿಭಾನ್ವಿತ ವಿದ್ಯಾರ್ಥಿ, ಜೊತೆಗೆ ಸಿಎ (CA) ಪರೀಕ್ಷೆಗೂ ತೀವ್ರ ಸಿದ್ಧತೆ ನಡೆಸುತ್ತಿದ್ದರು.
ಜಿಮ್ನಲ್ಲಿ ಅಭ್ಯಾಸ ಮಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಶಮಿಕ್ ಕುಸಿದು ಬಿದ್ದಿದ್ದು, ತಕ್ಷಣವೇ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಜೀವ ಹೋಗಿತ್ತು. ಉಜ್ವಲ ಭವಿಷ್ಯ ಹೊಂದಿದ್ದ ಯುವಕನ ಅಕಾಲಿಕ ಸಾವು ಕುಟುಂಬಸ್ಥರು ಹಾಗೂ ಸ್ನೇಹಿತರನ್ನು ತೀವ್ರ ಶೋಕದಲ್ಲಿ ಮುಳುಗಿಸಿದೆ.
- Advertisement -


