Sunday, April 28, 2024
Homeಕರಾವಳಿಪುತ್ತೂರು;  ಮೈ ಮೇಲೆ ಮರದ ದಿಮ್ಮಿ ಬಿದ್ದು ಸುಳ್ಯಪದವು ವಲಯ ಕಾಂಗ್ರೆಸ್ ಅಧ್ಯಕ್ಷ ಸಾವು

ಪುತ್ತೂರು;  ಮೈ ಮೇಲೆ ಮರದ ದಿಮ್ಮಿ ಬಿದ್ದು ಸುಳ್ಯಪದವು ವಲಯ ಕಾಂಗ್ರೆಸ್ ಅಧ್ಯಕ್ಷ ಸಾವು

spot_img
- Advertisement -
- Advertisement -

ಪುತ್ತೂರು;  ಮೈ ಮೇಲೆ ಮರದ ದಿಮ್ಮಿ ಬಿದ್ದು ಸುಳ್ಯಪದವು ವಲಯ ಕಾಂಗ್ರೆಸ್ ಅಧ್ಯಕ್ಷ ಸಾವನ್ನಪ್ಪಿದ ಘಟನೆ ಇಂದು ಬೆಳಗ್ಗೆ ನಡೆದಿದೆ. ಸುಳ್ಯ ಪದವು ಬಟ್ಟ್ಯಂಗಳ ನಿವಾಸಿ ಗೋಪಾಲಕೃಷ್ಣ ಮೃತ ದುರ್ದೈವಿ.

ಗೋಪಾಲಕೃಷ್ಣ ಅವರು ತನ್ನ ಮನೆಯ ಸಮೀಪ ಇರುವ ಮಾವಿನ ಮರದ ದಿಮ್ಮಿಗಳನ್ನು ಜೆಸಿಬಿ ಮೂಲಕ ಟಿಪ್ಪರ್ ವಾಹನಕ್ಕೆ ಲೋಡ್ ಮಾಡಲಾಗಿತ್ತು. ಟಿಪ್ಪರ್ ವಾಹನದ ಹಿಂದಿನ ಬಾಗಿಲನ್ನು ಸರಿಪಡಿಸುವ ಸಂದರ್ಭದಲ್ಲಿ ಮರದ ದಿಮ್ಮಿ ಹಿಂದಕ್ಕೆ ಬಂದು ಮೈಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ಕೂಡಲೇ ಗೋಪಾಲ ಕೃಷ್ಣ ಅವರನ್ನು ವಾಹನದಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಪಡುವನೂರು ಗ್ರಾಮದ ಸುಳ್ಳಪದವು ವಲಯದ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ, ಬಡಗನ್ನೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯರಾಗಿ, ಸುಳ್ಯ ಪದವು ಯುವ ಶಕ್ತಿ ಕಲಾ ಮತ್ತು ಕ್ರೀಡಾ ಬಳಗದ ಗೌರವಾಧ್ಯಕ್ಷರಾಗಿ, ಸುಳ್ಯ ಪದವು ಅಯ್ಯಪ್ಪ ಭಜನಾ ಮಂದಿರದ ಬ್ರಹ್ಮ ಕಳಶ ಸಮಿತಿಯ ಸ್ವಾಗತ ಸಮಿತಿಯ ಸಂಚಾಲಕರಾಗಿ, ಶ್ರೀಶೈಲಂ ಶಾಮಿಯಾನನ ಮಾಲಕರಾಗಿ, ಉತ್ತಮ ಕೃಷಿಕರಾಗಿ ಸಮಾಜದಲ್ಲಿ ಗುರುತಿಸಿಕೊಂಡಿದ್ದರು. ಮೃತರು ತಾಯಿ, ಪತ್ನಿ ಮೂವರು ಮಕ್ಕಳನ್ನು ಅಗಲಿದ್ದಾರೆ.

- Advertisement -
spot_img

Latest News

error: Content is protected !!