Wednesday, June 24, 2026
Homeಕರಾವಳಿಮಂಗಳೂರುಪುತ್ತೂರು; ಆರು ವರ್ಷಗಳಿಂದ ವಿಚಾರಣೆಗೆ ಹಾಜರಾಗದೇ ತರೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಪುತ್ತೂರು; ಆರು ವರ್ಷಗಳಿಂದ ವಿಚಾರಣೆಗೆ ಹಾಜರಾಗದೇ ತರೆಮರೆಸಿಕೊಂಡಿದ್ದ ಆರೋಪಿಯ ಬಂಧನ

- Advertisement -
- Advertisement -

ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿಯಾಗಿ  2018 ರಲ್ಲಿ  ಜಾಮೀನು ಪಡೆದ ನಂತರ  ನ್ಯಾಯಾಲಯದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಮಹಮ್ಮದ್ ಹನೀಫ್ (55), ವಾಸ:ಸೋಮವಾರ ಪೇಟೆ, ಕೊಡಗು ಮಡಿಕೇರಿ ಎಂಬಾತನನ್ನು ಕೊಡಗು ಜಿಲ್ಲೆಯ ಕುಶಾಲನಗರ ಎಂಬಲ್ಲಿ ಪತ್ತೆ ಮಾಡಿ ವಶಕ್ಕೆ ಪಡೆದುಕೊಳ್ಳಲಾಗಿದೆ.

ನ್ಯಾಯಾಲಯದ ಅದೇಶವನ್ನು ಉಲ್ಲಂಘಿಸಿ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಆರೋಪಿತನ ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕಲಂ: 269 ಬಿ.ಎನ್ ಎಸ್ ರಂತೆ ಪ್ರಕರಣ ದಾಖಲು ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ,  ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

- Advertisement -

Latest News

error: Content is protected !!