Thursday, August 13, 2026
Homeಕರಾವಳಿಮಂತ್ರಾಲಯಕ್ಕೆ ತೆರಳುತ್ತಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತದಿಂದ ನಿಧನ

ಮಂತ್ರಾಲಯಕ್ಕೆ ತೆರಳುತ್ತಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತದಿಂದ ನಿಧನ

- Advertisement -
- Advertisement -

ಪುತ್ತೂರು ಬಿಳಿಯೂರುಕಟ್ಟೆ ಮೂಲದ, ಪ್ರಸ್ತುತ ಮಂಗಳೂರಿನಲ್ಲಿ ನೆಲೆಸಿದ್ದ ಸಂದೀಪ್ ಶೆಟ್ಟಿ (44) ಎಂಬುವರು ಆ. 11ರ ಮುಂಜಾನೆ ಬಳ್ಳಾರಿ ಬಸ್ ನಿಲ್ದಾಣದಲ್ಲಿ ಸಂಭವಿಸಿದ ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಆ. 9ರಂದು ಬಸ್ಸಿನ ಮೂಲಕ ಮಂತ್ರಾಲಯಕ್ಕೆ ತೆರಳಿದ್ದ ಅವರು, ಪೂಜೆ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಆರಂಭದಲ್ಲಿ ಪುತ್ತೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದ ಸಂದೀಪ್, ಬಳಿಕ ಮಂಗಳೂರಿಗೆ ತೆರಳಿ ತಮ್ಮ ಉದ್ಯಮವನ್ನು ಮುಂದುವರಿಸಿದ್ದರು. ಒಂದು ವರ್ಷಗಳ ಕಾಲ ವಿದೇಶದಲ್ಲಿದ್ದು ಇತ್ತೀಚೆಗಷ್ಟೇ ಊರಿಗೆ ಮರಳಿದ್ದ ಅವರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.

- Advertisement -

Latest News

error: Content is protected !!