Sunday, June 7, 2026
Homeಕರಾವಳಿಮಂಗಳೂರುಮನೆ ಕಳ್ಳತನದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಪೊಲೀಸರು

ಮನೆ ಕಳ್ಳತನದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಪೊಲೀಸರು

- Advertisement -
- Advertisement -

ಪುತ್ತೂರು: ದಿನಾಂಕ:12.10.2025 ರಂದು  ಹಾಡಹಗಲೇ ರೇವತಿ ಎಂಬವರ ಮನೆಗೆ ನುಗ್ಗಿ ಚಿನ್ನದ ಬಳೆ-01, ಕಿವಿಯೋಲೆ-01 ಜೊತೆ, ಚಿನ್ನದ ಸರ-01 ಹಾಗೂ ನಗದು ಹಣ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ   ಪುತ್ತೂರು ನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಪುತ್ತೂರು ತಾಲೂಕು ಕಬಕದ ಸಿಟಿ ಗುಡ್ಡೆ ಮನೆಯ ಪ್ರವೀಣ್ (27) ಬಂಧಿತ ಆರೋಪಿ. ಈತನನ್ನು ಬಂಧಿಸಿರುವ ಪೊಲೀಸರು ಕಳವು ಮಾಡಿದ ಚಿನ್ನಾಭರಣ ಹಾಗೂ ನಗದು ಹಣವನ್ನು ವಶಕ್ಕೆ ಪಡೆದಿದ್ದಾರೆ. ಆರೊಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು  ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

- Advertisement -

Latest News

error: Content is protected !!