- Advertisement -


- Advertisement -
ಪುತ್ತೂರು: ಅಡುಗೆ ಮಾಡುತ್ತಿದ್ದ ಆಕಸ್ಮಿಕವಾಗಿ ಬಟ್ಟೆಗೆ ಬೆಂಕಿ ತಗುಲಿ ಗಾಯಗೊಂಡಿದ್ದ ವೃದ್ಧೆ ಚಿಕಿತ್ಸೆ ಫಲಿಸದೇ ಸಾನ್ನಪ್ಪಿರುವ ಘಟನೆ ಒಳಮೊಗ್ರು ಗ್ರಾಮದ ಮುರುವ ಎಂಬಲ್ಲಿ ನಡೆದಿದೆ. ಐಸಮ್ಮ (75) ಮೃತ ವೃದ್ಧೆ.
ಐಸಮ್ಮ ಅವರು ಮನೆಯಲ್ಲಿ ಆಡುಗೆ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಅವರ ಬಟ್ಟೆಗೆ ಬೆಂಕಿ ಹತ್ತಿಕೊಂಡಿತ್ತು.ತಕ್ಷಣ ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಜ.18ರಂದು ಮೃತಪಟ್ಟಿದ್ದಾರೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೃತರ ಪುತ್ರಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.
- Advertisement -


