Saturday, May 18, 2024
Homeಕರಾವಳಿಏಪ್ರಿಲ್ 10 ರಿಂದ ಪುತ್ತೂರು ಜಾತ್ರೋತ್ಸವ ಆರಂಭ ; ಈ ಬಾರಿ ವಸ್ತ್ರ ಸಂಹಿತೆ ಕಡ್ಡಾಯ

ಏಪ್ರಿಲ್ 10 ರಿಂದ ಪುತ್ತೂರು ಜಾತ್ರೋತ್ಸವ ಆರಂಭ ; ಈ ಬಾರಿ ವಸ್ತ್ರ ಸಂಹಿತೆ ಕಡ್ಡಾಯ

spot_img
- Advertisement -
- Advertisement -

ಪುತ್ತೂರು; ಹತ್ತೂರ ಒಡೆಯ ಪುತ್ತೂರು ಮಹಾಲಿಂಗೇಶ್ವರನ ವಾರ್ಷಿಕ ಜಾತ್ರಾ ಮಹೋತ್ಸವ ಏಪ್ರಿಲ್ 10 ರಿಂದ 20 ರವರೆಗೆ ನಡೆಯಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಹೇಳಿದ್ದಾರೆ.

ಎಪ್ರಿಲ್ 10 ರಂದು ಬೆಳಿಗ್ಗೆ 9.25 ಕ್ಕೆ ಧ್ವಜಾರೋಹಣ ನೆರವೇರಲಿದ್ದು, ಎಪ್ರಿಲ್‌ 16 ರಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ಭೇಟಿ, ಎಪ್ರಿಲ್ 17 ರಂದು ಸಿಡಿಮದ್ದು ಪ್ರದರ್ಶನ ಹಾಗು ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವ ನಡೆಯಲಿದೆ. ಈ ಬಾರಿ ದೇವರ ಪುಷ್ಕರಣಿಯಲ್ಲಿ ವರುಣ ದೇವರ ವಿಗ್ರಹದ ಪ್ರತಿಷ್ಠಾಪನೆ ಮಾಡಲಾಗುತ್ತಿದ್ದು, ಪುಷ್ಕರಣಿಯಲ್ಲಿ ಇಳಿಯುವ ಭಕ್ತಾಧಿಗಳಿಗೆ ಕಡ್ಡಾಯ ವಸ್ತಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಕೇವಲ ಸಾಂಪ್ರದಾಯಿಕ ಉಡುಗೆಯಲ್ಲಿ ಬರುವ ಭಕ್ತಾಧಿಗಳಿಗೆ ಮಾತ್ರ ವರುಣ ದೇವರಿಗೆ ಪೂಜೆ ಸಲ್ಲಿಸಲು ಅವಕಾಶ ನೀಡಲಾಗುತ್ತದೆ ಎಂದ ಅವರು ದೇವರ ಬ್ರಹ್ಮರಥ ಎಳೆಯುವ ಸೇವಾಕರ್ತರಿಗೂ ವಸ್ತ್ರಸಂಹಿತೆ ಕಡ್ಡಾಯವಾಗಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಹೇಳಿದ್ದಾರೆ.

ಇನ್ನು ಜಾತ್ರೆ ನಡೆಯುವ ಹತ್ತು ದಿನವೂ ಭಕ್ತಾಧಿಗಳು ಸಾಂಪ್ರದಾಯಿಕ ಉಡುಗೆಯಲ್ಲೇ ದೇವಸ್ಥಾನಕ್ಕೆ ಬರಬೇಕು ಎನ್ನುವುದು ಸಮಿತಿಯ ಆಗ್ರಹವಾಗಿದೆ ಎಂದಿದ್ದಾರೆ.

- Advertisement -
spot_img

Latest News

error: Content is protected !!