Saturday, October 17, 2026
Homeಕರಾವಳಿಮಂಗಳೂರುಪುತ್ತೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ-ಕಾರು ಭೀಕರ ಡಿಕ್ಕಿ; ಲಾರಿ ಮಗುಚಿ ಸಂಚಾರ ಅಸ್ತವ್ಯಸ್ತ

ಪುತ್ತೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ-ಕಾರು ಭೀಕರ ಡಿಕ್ಕಿ; ಲಾರಿ ಮಗುಚಿ ಸಂಚಾರ ಅಸ್ತವ್ಯಸ್ತ

- Advertisement -
- Advertisement -

ಪುತ್ತೂರು: ರಾಷ್ಟ್ರೀಯ ಹೆದ್ದಾರಿ 275ರ ಸಂಟ್ಯಾರ್ ಸಮೀಪ ಗುರುವಾರ ಲಾರಿ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅತಿವೇಗ ಹಾಗೂ ಓವರ್‌ಟೇಕ್ ಮಾಡುವ ಭರದಲ್ಲಿ ಈ ದುರಂತ ನಡೆದಿದ್ದು, ಡಿಕ್ಕಿಯ ರಭಸಕ್ಕೆ ಚಾಲಕನ ನಿಯಂತ್ರಣ ತಪ್ಪಿದ ಲಾರಿ ರಸ್ತೆಯಲ್ಲೇ ಮಗುಚಿಬಿದ್ದಿದೆ.

ಓವರ್‌ಟೇಕ್ ಮಾಡಲು ಯತ್ನಿಸಿದಾಗ ಸಂಭವಿಸಿದ ಈ ಡಿಕ್ಕಿಯಿಂದಾಗಿ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಸ್ಥಳೀಯರು ತಕ್ಷಣವೇ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಲಾರಿ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದರಿಂದ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಸಂಪೂರ್ಣ ಸ್ತಬ್ಧಗೊಂಡು, ಸಾಲುಗಟ್ಟಿ ನಿಂತಿದ್ದವು.

ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ಭೇಟಿ ನೀಡಿ, ಕ್ರೇನ್ ಮೂಲಕ ಲಾರಿಯನ್ನು ತೆರವುಗೊಳಿಸಿ ಸಂಚಾರ ಸುಗಮಗೊಳಿಸಿದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!