Wednesday, June 26, 2024
HomeUncategorizedಪುತ್ತೂರು: ಕೋಟಿ-ಚೆನ್ನಯ' ಜೋಡುಕರೆ ಕಂಬಳ

ಪುತ್ತೂರು: ಕೋಟಿ-ಚೆನ್ನಯ’ ಜೋಡುಕರೆ ಕಂಬಳ

spot_img
- Advertisement -
- Advertisement -

ಪುತ್ತೂರು: 29ನೇ ವರ್ಷದ ಹೊನಲು ಬೆಳಕಿನ `ಕೋಟಿ-ಚೆನ್ನಯ’ ಜೋಡುಕರೆ ಕಂಬಳವು ಮಾರ್ಚ್ 19ರಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಯಲ್ಲಿ ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ಎನ್.ಚಂದ್ರಹಾಸ ಶೆಟ್ಟಿ ತಿಳಿಸಿದ್ದಾರೆ.


ಅವರು ಇಂದು ಪುತ್ತೂರು ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರ ಶುಭಾಶೀರ್ವಾದದೊಂದಿಗೆ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮತ್ತು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ಕೋಟಿ-ಚೆನ್ನಯ ಜೋಡುಕರೆ ಕಂಬಳ ನಡೆಯಲಿದೆ. ಮಾರ್ಚ್ 19ರಂದು ಪೂರ್ವಾಹ್ನ ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್ ಕಂಬಳವನ್ನು ಉದ್ಘಾಟಿಸಲಿದ್ದಾರೆ. ಸವಣೂರು ವಿದ್ಯಾರಶ್ಮಿಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ.ಸೀತಾರಾಮ ರೈ ಸವಣೂರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

- Advertisement -
spot_img

Latest News

error: Content is protected !!