- Advertisement -
- Advertisement -
ಪುತ್ತೂರು: ವೃದ್ಧ ಮಹಿಳೆಯೊಬ್ಬರು ಬಾವಿಗೆ ಬಿದ್ದು ಮೃತಪಟ್ಟ ಘಟನೆ ಪುತ್ತೂರು ನಗರದ ಹೊರವಲಯದ ಸಾಲ್ಮರ ಎಂಬಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.
ಸಾಲ್ಮರ ಮದ್ದೋಡಿ ನಿವಾಸಿ ಸೀತಾ ಯಾನೆ ಸೀತಮ್ಮ(83) ಮೃತಪಟ್ಟ ಮಹಿಳೆ. ಬುಧವಾರ ಬೆಳಗ್ಗೆ ಸೀತಾ ಅವರು ನಾಪತ್ತೆ ಕಾರಣ ಮನೆ ಮಂದಿ ಹುಡುಕಾಟ ನಡೆಸಿದ್ದರು. ಈ ಸಂದರ್ಭದಲ್ಲಿ ಮನೆಯ ಬಾವಿಯಲ್ಲಿ ಮೃತದೇಹ ಪತ್ತೆಯಾಗಿತ್ತು.
ಪುತ್ತೂರು ಅಗ್ನಿಶಾಮಕ ದಳದವರು ಮೃತದೇಹವನ್ನು ಬಾವಿಯಿಂದ ಮೇಲಕ್ಕೆತ್ತಿದರು. ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಪುತ್ತೂರು ನಗರ ಠಾಣಾ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಮೃತರು ಮೂವರು ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
- Advertisement -