Monday, May 6, 2024
Homeಕರಾವಳಿಪುತ್ತೂರು;ಕೊಟ್ಟಿಗೆಯಲ್ಲಿ ಮಲಗಿದ್ದ ವ್ಯಕ್ತಿಗೆ ಸಿಡಿಲು ಬಡಿದು ಗಾಯ

ಪುತ್ತೂರು;ಕೊಟ್ಟಿಗೆಯಲ್ಲಿ ಮಲಗಿದ್ದ ವ್ಯಕ್ತಿಗೆ ಸಿಡಿಲು ಬಡಿದು ಗಾಯ

spot_img
- Advertisement -
- Advertisement -

ಪುತ್ತೂರು;ಕೊಟ್ಟಿಗೆಯಲ್ಲಿ ಮಲಗಿದ್ದ ವ್ಯಕ್ತಿ ಸಿಡಿಲು ಬಡಿದು ಗಾಯಗೊಂಡ ಘಟನೆ  ಪುತ್ತೂರಿನ ಅರಿಯಡ್ಕ ಗ್ರಾಮದ ಶೇಖಮಲೆ ಜಾರತ್ತಾರು ಎಂಬಲ್ಲಿ ನಡೆದಿದೆ.

ನಿನ್ನೆ ಮಧ್ಯರಾತ್ರಿ ಜಾರತ್ತಾರು ರಾಮ ಎಂಬವರ ಮನೆಯ ಕೊಟ್ಟಿಗೆಗೆ ಸಿಡಿಲು ಬಡಿದಿದೆ. ಈ ವೇಳೆ ರಾಮ ಕೊಟ್ಟಿಗೆಯಲ್ಲಿ ಮಲಗಿದ್ದರು. ಮಲಗಿದ್ದಲ್ಲಿಗೆ ಸಿಡಿಲು ಬಡಿದುದರಿಂದ ಅವರು ಹಾಕಿಕೊಂಡಿದ್ದ ಬಟ್ಟೆ, ಚಾಪೆ ಸುಟ್ಟು ಹೋಗಿದೆ. ಬೆನ್ನಿನ ಭಾಗಕ್ಕೆ ಗಾಯಗಳಾಗಿವೆ ಎನ್ನಲಾಗಿದೆ.  ಗಾಯಾಳುವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -
spot_img

Latest News

error: Content is protected !!