Tuesday, June 23, 2026
Homeಕರಾವಳಿಮಂಗಳೂರುಪುತ್ತೂರು; ಮಾದಕ ದ್ರವ್ಯ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದಾತನ ಬಂಧನ

ಪುತ್ತೂರು; ಮಾದಕ ದ್ರವ್ಯ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದಾತನ ಬಂಧನ

- Advertisement -
- Advertisement -

ಪುತ್ತೂರು; ಮಾದಕ ದ್ರವ್ಯ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದಾನನ್ನು ಪೊಲೀಸರು ಬಂಧಿಸಿರುವ ಘಟನೆ ಪುತ್ತೂರು ತಾಲೂಕು ಬಜತ್ತೂರು ಗ್ರಾಮದ ಕಾಂಚನ ಮುಕ್ವೆ ಎಂಬಲ್ಲಿ ನಡೆದಿದೆ. ವಿಟ್ಲದ ಪಡ್ನೂರು ಗ್ರಾಮದ ಮಹಮ್ಮದ್ ಮೋಹಾದ್ ಎಸ್ (33) ಬಂಧಿತ ಆರೋಪಿ.

ದಿನಾಂಕ 17-02-2026 ರಂದು ವ್ಯಕ್ತಿಯು ಸಿಗರೇಟ್‌ ಸೇದುತ್ತಾ ಅಸಭ್ಯವಾಗಿ ವರ್ತಿಸುತ್ತಿರುವುದಾಗಿ ಸಾರ್ವಜನಿಕರಿಂದ ಬಂದ ಮಾಹಿತಿಯಂತೆ  ಆ ವ್ಯಕ್ತಿಯನ್ನು ಉಪ್ಪಿನಂಗಡಿ ಪೊಲೀಸ್  ಠಾಣೆಯ ರೌಂಡ್ಸ್ ಕರ್ತವ್ಯದಲ್ಲಿದ್ದ ಪೊಲೀಸ್ ಉಪ ನಿರೀಕ್ಷಕರಾದ ಸುರೇಶ್ ಸಿ.ಟಿ ರವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ವಶಕ್ಕೆ ಪಡೆದಿದ್ದು, ವಿಚಾರಣೆ ವೇಳೆ, ಆತ ತನ್ನ ಮನೆಗೆ ಹೋಗುವ ದಾರಿಯಲ್ಲಿ ಸಿಗರೇಟ್‌ ಸೇದಿರುವುದೆಂದು ಗೊತ್ತಾಗಿದೆ. ನಂತರ ಆ ವ್ಯಕ್ತಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಮಾದಕ ದ್ರವ್ಯ ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 24/2026 ರಂತೆ ಕಲಂ 27(b) NDPS Act ನಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

- Advertisement -

Latest News

error: Content is protected !!