- Advertisement -
- Advertisement -
ಪುತ್ತೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದಾತನನ್ನು ಅರೆಸ್ಟ್ ಮಾಡಿರುವ ಘಟನೆ ಪುತ್ತೂರಿನ ನೆಹರೂ ನಗರದಲ್ಲಿ ನಡೆದಿದೆ. ನವೀನ್ ಚಂದ್ರ (49) ಬಂಧಿತ ಆರೋಪಿ.
ಅಪ್ರಾಪ್ತ ಬಾಲಕಿ ತನ್ನ ತಾಯಿಯೊಂದಿಗೆ, ಪುತ್ತೂರು ನೆಹರೂ ನಗರ ಜಂಕ್ಷನ್ ನಲ್ಲಿ ಬಸ್ ಗಾಗಿ ಕಾಯುತ್ತಿದ್ದಾಗ, ಅಪರಿಚಿತ ವ್ಯಕ್ತಿಯೊಬ್ಬ ಬಂದು ಸಂತ್ರಸ್ಥ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿ ಹಲ್ಲೆ ನಡೆಸಿರುತ್ತಾನೆ. ಈ ಬಗ್ಗೆ ಸಂತ್ರಸ್ಥೆಯ ತಾಯಿ ನೀಡಿದ ದೂರಿನ ಮೇರೆಗೆ, ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರಂತೆ ತನಿಖೆ ನಡೆಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸದ್ಯ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು ಆರೋಪಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.
- Advertisement -