Friday, June 5, 2026
Homeಕರಾವಳಿಮಂಗಳೂರುಪುತ್ತೂರು: ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲಿ ವ್ಯಕ್ತಿಗೆ ಚೂರಿ ಇರಿತ

ಪುತ್ತೂರು: ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲಿ ವ್ಯಕ್ತಿಗೆ ಚೂರಿ ಇರಿತ

- Advertisement -
- Advertisement -

ಪುತ್ತೂರು: ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲಿ ವ್ಯಕ್ತಿಗೆ ಚೂರಿಯಿಂದ ಇರಿದಿರುವ ಘಟನೆ ಪುತ್ತೂರು ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲಿ ನಡೆದಿದೆ.

ಬಸ್ ನಿಲ್ದಾಣದಲ್ಲಿ ಕೂಲಿ ಕಾರ್ಮಿಕರ ನಡುವೆ ಮಾತಿನ ಚಕಮಕಿ ನಡೆದು ಚೂರಿಯಿಂದ ಒಬ್ಬ ಕಾರ್ಮಿಕ ಮತ್ತೊರ್ವ ಕಾರ್ಮಿಕನಿಗೆ ಇರಿದಿದ್ದಾನೆ. ಬೆಳಗಾವಿ ಜಿಲ್ಲೆಯ ಮಲ್ಲಪುರ ಗೋಕಾಕ್‌ ನಿವಾಸಿ ಕೂಲಿ ಕಾರ್ಮಿಕ ಆನಂದ ಬಾಂದಾವಿ ಚೂರಿ ಇರಿತಕ್ಕೊಳಗಾದವರು. ಗಾಯಾಳು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಆನಂದ್ ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲಿ ಪರಿಚಯಸ್ಥರಾದ ಅವಿನಾಶ್‌, ನಾರಾಯಣ, ದುರ್ಗೇಶ್‌ ಮತ್ತು ಹರೀಶ್‌ರೊಂದಿಗೆ ಕುಳಿತುಕೊಂಡು ಮಾತನಾಡುತ್ತಿದ್ದಾಗ ಆರೋಪಿ ಅವಿನಾಶ್‌ ಏಕಾಏಕಿಯಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿ ಬಳಿಕ ಚಾಕುವಿನಿಂದ ಹೊಟ್ಟೆಗೆ ಇರಿದಿದ್ದಾನೆ. ಈ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!