- Advertisement -
- Advertisement -
ಪುತ್ತೂರು: ತೀವ್ರ ಜ್ವರದಿಂದ ಬಳಲುತ್ತಿದ್ದ ಚಿಕ್ಕಮುನ್ನೂರು ಗ್ರಾಮದ ಮುದ್ದೋಡಿ ನಿವಾಸಿ ಸೌಮ್ಯ (24) ಎಂಬವರು ಆ.29ರಂದು ನಿಧನರಾಗಿದ್ದಾರೆ.
ಮುದ್ದೋಡಿಯ ಶೇಖರ್ ಅವರ ಪತ್ನಿಯಾಗಿರುವ ಸೌಮ್ಯ, ಕಳೆದ ಕೆಲವು ದಿನಗಳಿಂದ ಜ್ವರ ಬಳಲುತ್ತಿದ್ದು ಕ್ಲಿನಿಕ್ ಒಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆ.29ರಂದು ಆರೋಗ್ಯ ಸ್ಥಿತಿ ಕ್ಷೀಣಿಸಿದ ಹಿನ್ನೆಲೆಯಲ್ಲಿ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ. ಮೃತರು ಪತಿ ಹಾಗೂ 1.5 ವರ್ಷದ ಮಗುವನ್ನು ಅಗಲಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮೃತರ ತಾಯಿ ಸುಂದರಿ ನೀಡಿದ ದೂರಿನಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -


