Saturday, August 22, 2026
Homeಕರಾವಳಿಮಂಗಳೂರುಪುತ್ತೂರು: ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣಕ್ಕೆ ಹೊಸ ಟ್ವಿಸ್ಟ್, CCTV ದೃಶ್ಯ ಲಭ್ಯ!

ಪುತ್ತೂರು: ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣಕ್ಕೆ ಹೊಸ ಟ್ವಿಸ್ಟ್, CCTV ದೃಶ್ಯ ಲಭ್ಯ!

- Advertisement -
- Advertisement -

ಪುತ್ತೂರು : ಇಲ್ಲಿನ ದರ್ಬೆಯ ಜೆರಾಕ್ಸ್ ಅಂಗಡಿಯೊಂದರಲ್ಲಿ ನಡೆದಿದ್ದ ಹಲ್ಲೆ ಹಾಗೂ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಾವಳಿಗಳು ಲಭ್ಯವಾಗಿದ್ದು, ಘಟನೆಗೆ ಹೊಸ ತಿರುವು ಸಿಕ್ಕಿದೆ.

ದಾಖಲೆಗಳ ಜೆರಾಕ್ಸ್ ವಿಚಾರವಾಗಿ ಅಂಗಡಿ ಮಾಲಕರು ಹಾಗೂ ಗ್ರಾಹಕರ ನಡುವೆ ಗಲಾಟೆ ನಡೆದಿದ್ದು, ಗ್ರಾಹಕರೊಬ್ಬರು ಮೊಬೈಲ್‌ನಲ್ಲಿ ವಿಡಿಯೋ ಮಾಡಲು ಯತ್ನಿಸಿದ್ದಾರೆ. ಇದನ್ನು ಅಂಗಡಿ ಮಾಲಕಿ ಅಂಜನಾ ಪೈ ತಡೆದಾಗ, ಅವರ ಪುತ್ರ ಸುದರ್ಶನ ಪೈ ಗ್ರಾಹಕನ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ತದನಂತರ ಎರಡೂ ಕಡೆಯವರ ನಡುವೆ ತೀವ್ರ ಕೈಕೈ ಮಿಲಾಯಿಸುವ ಹಂತಕ್ಕೆ ವಾಗ್ವಾದ ತಲುಪಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಭಾರೀ ವಿವಾದ ಸೃಷ್ಟಿಸಿದ್ದ ಈ ಪ್ರಕರಣದ ತನಿಖೆಗೆ ಸಿಸಿಟಿವಿ ದೃಶ್ಯವೇ ಪ್ರಮುಖ ಸಾಕ್ಷಿಯಾಗಿದೆ.

- Advertisement -

Latest News

error: Content is protected !!