ಪುತ್ತೂರು: ವ್ಯಕ್ತಿಯೊಬ್ಬರಿಗೆ ಪಿಸ್ತೂಲ್ ನಿಂದ ಗುಂಡು ಹಾರಿಸಲು ಯತ್ನಿಸಿದ ಯುವಕನನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಪುತ್ತೂರು ಕೆಮ್ಮಿಂಜೆ ನಿವಾಸಿ ಅಬ್ದುಲ್ ಹಕೀಂ (42) ಎಂಬವರು, ದಿನಾಂಕ 02-03-2026 ರಂದು ಮಧ್ಯಾಹ್ನ, ಪುತ್ತೂರಿನಿಂದ ಕೂರ್ನಡ್ಕಕ್ಕೆ ತನ್ನ ಕಾರಿನಲ್ಲಿ ಹೋಗುತ್ತಿದ್ದಾಗ, ಪುತ್ತೂರು ರಿಲಾಯೆನ್ಸ್ ಮಾಲ್ ಬಳಿ ಬೈಕ್ ನಲ್ಲಿ ಹೆಲ್ಮೆಟ್ ಧರಿಸದೆ ಬಂದ ಅಪರಿಚಿತ ವ್ಯಕ್ತಿಯೊಬ್ಬ ಅಬ್ದುಲ್ ಹಕೀಂರ ಕಡೆಗೆ ಪಿಸ್ತೂಲ್ ನ್ನು ತೋರಿಸಿ ಗುಂಡು ಹೊಡೆಯಲು ಪ್ರಯತ್ನಿಸಿ ಬೆದರಿಸಿದ್ದಾನೆ. ಈ ವೇಳೆ ಅಬ್ದುಲ್ ಹಕೀಂ ಹಾಗೂ ಇತರರು ಸೇರಿ ಆತನು ಹಿಡಿಯಲು ಹೋದಾಗ ಆತನು ಬೈಕ್ ನಲ್ಲಿ ಪರಾರಿಯಾಗಿದ್ದ. ಈ ಬಗ್ಗೆ , ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ ಕ್ರ ನಂಬರ್: 26/2026, ಕಲಂ: 351(3) BNS 2023 ಮತ್ತು ಕಲಂ: 3, 25, 27 ಶಸ್ತ್ರಾಸ್ತ್ರ ಕಾಯ್ದೆ 1959 ಯಡಿ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಲಾಗುವಾಗ ಆರೋಪಿಪುತ್ತೂರು ನಿವಾಸಿ ಮಹಮ್ಮದ್ ಶಫಿಕ್ (19) ಅನ್ನೋದು ಗೊತ್ತಾಗಿದೆ. ಅದರಂತೆ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಯ ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.


