Friday, June 5, 2026
Homeಕರಾವಳಿಪುತ್ತೂರು: ಬೈಕ್-ರಿಕ್ಷಾ ನಡುವೆ ಭೀಕರ ರಸ್ತೆ ಅಪಘಾತ, ಸುಳ್ಯ ಕಾಲೇಜ್ ವಿದ್ಯಾರ್ಥಿ ದಾರುಣ ಮೃತ್ಯು!

ಪುತ್ತೂರು: ಬೈಕ್-ರಿಕ್ಷಾ ನಡುವೆ ಭೀಕರ ರಸ್ತೆ ಅಪಘಾತ, ಸುಳ್ಯ ಕಾಲೇಜ್ ವಿದ್ಯಾರ್ಥಿ ದಾರುಣ ಮೃತ್ಯು!

- Advertisement -
- Advertisement -

ಪುತ್ತೂರು: ಬೈಕ್ ಮತ್ತು ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಮುರ ಎಂಬಲ್ಲಿ ಇಂದು ರಾತ್ರಿ ನಡೆದಿದೆ.

ಮೃತಪಟ್ಟ ಯುವಕನನ್ನು ಪುತ್ತೂರು ತಾಲೂಕಿನ ಬನ್ನೂರು ನಿವಾಸಿ ಅಭಿನವ್(23) ಎಂದು ಗುರುತಿಸಲಾಗಿದೆ. ಅಭಿನವ್ ಅವರು ಸುಳ್ಯ ಕೆ.ವಿ.ಜಿ ಕಾಲೇಜ್ ವಿದ್ಯಾರ್ಥಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಪುತ್ತೂರಿನಿಂದ ಕೆದಿಲಕ್ಕೆ ತಿರುಗುವ ಕ್ರಾಸ್ ಬಳಿ ಈ ದುರ್ಘಟನೆ ನಡೆದಿದೆ. ಕಬಕ ಕಡೆಯಿಂದ ಪುತ್ತೂರಿಗೆ ಆಗಮಿಸುತ್ತಿದ್ದ ಅಭಿನವ್, ಕೆದಿಲ ಕಡೆಗೆ ಹೋಗುತ್ತಿದ್ದ ರಿಕ್ಷಾಗೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯ ರಭಸಕ್ಕೆ ಅಭಿನಯ್ ರಸ್ತೆಗೆ ಎಸೆಯಲ್ಪಟ್ಟಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪುತ್ತೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!