Sunday, June 7, 2026
Homeಅಪರಾಧಪುತ್ತೂರು: ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ, ಪ್ರತಿಷ್ಠಿತ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕರ...

ಪುತ್ತೂರು: ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ, ಪ್ರತಿಷ್ಠಿತ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕರ ಬಂಧನ

- Advertisement -
- Advertisement -

ಪುತ್ತೂರು: ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿ ಪುತ್ತೂರಿನ ಪ್ರತಿಷ್ಠಿತ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕರೊಬ್ಬರನ್ನು ಪೋಕ್ಸೊ ಕಾಯ್ದೆಯಡಿ ಮಹಿಳಾ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ತಿಮ್ಮಪ್ಪ ನಾಯ್ಕ ನೇತೃತ್ವದಲ್ಲಿ ಪುತ್ತೂರು ಕ್ಲಬ್ ಬಳಿ ಬಂಧಿಸಲಾಗಿದೆ.

ದೈಹಿಕ ಶಿಕ್ಷಣ ನಿರ್ದೇಶಕ ಕೊಂಬೆಟ್ಟು ನಿವಾಸಿ ಎಲ್ಯಾಸ್ ಪಿಂಟೋ ಬಂಧಿತ ಆರೋಪಿ. ಸೊಂಟ ನೋವು ಎಂದು ಹೇಳಿದ್ದ ವಿದ್ಯಾಸಂಸ್ಥೆಯ ವಸತಿ ನಿಲಯದಲ್ಲಿರುವ ಮಡಿಕೇರಿ ಮೂಲದ ಅಪ್ರಾಪ್ತ ವಿದ್ಯಾರ್ಥಿನಿಗೆ ಅ.23ರಂದು ಎಲ್ಯಾಸ್ ಪಿಂಟೋರವರು ವ್ಯಾಯಾಮ ಮಾಡಿಸಿದರೆಂದೂ ಈ ವೇಳೆ ಆಕೆಯ ಸೊಂಟ ಮುಟ್ಟಿದರೆಂದೂ ಆರೋಪ ಕೇಳಿ ಬಂದಿದೆ.

ಈ ವಿಚಾರವನ್ನು ವಿದ್ಯಾರ್ಥಿನಿ ತನ್ನ ಪೋಷಕರಿಗೆ ತಿಳಿಸಿದ್ದರು. ಆಕೆಯ ಪೋಷಕರು ಸಂಸ್ಥೆಗೆ ಬಂದು ಆಕೆಯನ್ನು ವಿಚಾರಿಸಿ ಬಳಿಕ ಅ.25ರಂಂದು ಸಂಜೆ ಘಟನೆಯ ಕುರಿತು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಹಲವಾರು ವರ್ಷಗಳಿಂದ ನೃತ್ಯ ತರಬೇತಿಯೂ ನೀಡುತ್ತಿರುವ ಮತ್ತು ದೈಹಿಕ ಶಿಕ್ಷಣ ನಿರ್ದೇಶಕರಾಗಿ ನೂರಾರು ಕ್ರೀಡಾ ಪ್ರತಿಭೆಗಳನ್ನು ಬೆಳೆಸಿರುವ ಎಲ್ಯಾಸ್ ಪಿಂಟೋರವರು ಇಂತಹ ಆರೋಪದಡಿ ಬಂಧಿತರಾಗಿದ್ದಾರೆ ಎಂಬ ವಿಚಾರ ಪ್ರಚಾರ ಆಗುತ್ತಿದ್ದಂತೆಯೇ ಅವರ ಆಪ್ತರು ದಿಗ್ಬ್ರಮೆ ವ್ಯಕ್ತಪಡಿಸಿದ್ದಾರೆ.

ಇಂದು ನ್ಯಾಯಾಲಯಕ್ಕೆ ಹಾಜರು:
ಬಂಧಿತ ಇಲ್ಯಾಸ್ ಪಿಂಟೋರವರನ್ನು ಅ.26ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿದೆ. ಪಿಂಟೋ‌ ವಿರುದ್ಧ ದೂರು ದಾಖಲಿಸಿರುವ ವಿದ್ಯಾರ್ಥಿನಿ ಅದೇ ಸಮುದಾಯಕ್ಕೆ ಸೇರಿದವರೆಂದು ತಿಳಿದು ಬಂದಿದೆ.

- Advertisement -

Latest News

error: Content is protected !!