Saturday, June 6, 2026
Homeಕರಾವಳಿಪುತ್ತೂರು;   ತಾಲೂಕು ಕಚೇರಿಯ ಸಿಬ್ಬಂದಿ ಕನಕರಾಜ್ ಹೃದಯಾಘಾತದಿಂದ ನಿಧನ

ಪುತ್ತೂರು;   ತಾಲೂಕು ಕಚೇರಿಯ ಸಿಬ್ಬಂದಿ ಕನಕರಾಜ್ ಹೃದಯಾಘಾತದಿಂದ ನಿಧನ

- Advertisement -
- Advertisement -

ಪುತ್ತೂರು;   ತಾಲೂಕು ಕಚೇರಿಯ ಸಿಬ್ಬಂದಿ ಕನಕರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕನಕರಾಜ್ ಅವರು ತಾಲೂಕು ಕಚೇರಿಯ ಚುನಾವಣಾ ಶಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಸೇವೆ ಸಲ್ಲಿಸುತ್ತಿದ್ದರು. ಸೆಪ್ಟಂಬರ್ 25 ರಂದು ರಾತ್ರಿ ಹೃದಯಾಘಾತದಿಂದ ಅವರು ನಿಧನರಾಗಿದ್ದಾರೆ.

ಬುಧವಾರ ರಾತ್ರಿ ಕನಕರಾಜ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆ ತರಲಾಗಿದೆ ಆಸ್ಪತ್ರೆಗೆ ಬರುವಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ.ಚಾಮರಾಜನಗರದ ಕೊಳ್ಳೇಗಾಲದ ನಿವಾಸಿಯಾಗಿರುವ ಕನಕರಾಜ್ ಅವರು ಈ ಹಿಂದೆ ಕಡಬ ಹಾಗೂ ಬೆಟ್ಟಂಪಾಡಿಯಲ್ಲಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

- Advertisement -

Latest News

error: Content is protected !!