- Advertisement -
![]()
- Advertisement -
ಪುತ್ತೂರು; ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು ಯುವಕ ಸಾವನ್ನಪ್ಪಿರುವ ಘಟನೆ ತಿಂಗಳಾಡಿ ಸಮೀಪದ ತ್ಯಾಗರಾಜ ನಗರದಲ್ಲಿ ಮಂಗಳವಾರ (ಮಾ.3) ರಾತ್ರಿ ನಡೆದಿದೆ. ಕುಂಬ್ರ ಶಾಲಾ ಬಳಿಯ ನಿವಾಸಿ ಭುವನ್ (33) ಮೃತ ಯುವಕ.
ಭುವನ್ ನಿಂತಿಕಲ್ಲಿನ ಬಾರ್ ವೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಮಂಗಳವಾರ ಕೆಲಸಕ್ಕೆ ರಜೆ ಹಾಕಿದ್ದರು. ಕೆಯ್ಯೂರು ಕಡೆಗೆ ಹೋಗಿ ಮರಳಿ ಮನೆಗೆ ಬರುತ್ತಿದ್ದ ವೇಳೆ ಬೈಕ್ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ. ಮೃತರು ತಾಯಿ, ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
- Advertisement -


