Wednesday, July 22, 2026
Homeಕರಾವಳಿಪುತ್ತೂರು: ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ, ದೈಹಿಕ ಶಿಕ್ಷಣ ನಿರ್ದೇಶಕನಿಗೆ ಜಾಮೀನು

ಪುತ್ತೂರು: ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ, ದೈಹಿಕ ಶಿಕ್ಷಣ ನಿರ್ದೇಶಕನಿಗೆ ಜಾಮೀನು

- Advertisement -
- Advertisement -

ಪುತ್ತೂರು: ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿ ಬಂಧನಕ್ಕೊಳಗಾಗಿದ್ದ ಪುತ್ತೂರಿನ ಪ್ರತಿಷ್ಠಿತ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋಗೆ ಪುತ್ತೂರು ನ್ಯಾಯಾಲಯ ಶರತ್ತು ಬದ್ಧ ಜಾಮೀನು ಮಂಜೂರುಗೊಳಿಸಿದೆ.

ಏನಿದು ಪ್ರಕರಣ:
ಅ.23ರಂದು ವಿದ್ಯಾಸಂಸ್ಥೆಯ ವಸತಿ ನಿಲಯದಲ್ಲಿರುವ ಮಡಿಕೇರಿ ಮೂಲದ ಅಪ್ರಾಪ್ತ ವಿದ್ಯಾರ್ಥಿನಿ ತನಗೆ ಸೊಂಟ ನೋವು ಎಂದು ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋರ ಬಳಿ ಹೇಳಿದ್ದಳು. ಈ ಸಂದರ್ಭದಲ್ಲಿ ಎಲ್ಯಾಸ್ ಪಿಂಟೋ ವ್ಯಾಯಾಮ ಮಾಡಿಸಿದ್ದು, ಈ ವೇಳೆ ಆಕೆಯ ಸೊಂಟ ಮುಟ್ಟಿದರೆಂದೂ ಆರೋಪ ಕೇಳಿ ಬಂದಿತ್ತು.

ಈ ವಿಚಾರವನ್ನು ವಿದ್ಯಾರ್ಥಿನಿ ತನ್ನ ಪೋಷಕರಿಗೆ ತಿಳಿಸಿದ್ದ ಳು . ಆಕೆಯ ಪೋಷಕರು ಸಂಸ್ಥೆಗೆ ಬಂದು ಆಕೆಯನ್ನು ವಿಚಾರಿಸಿ ಬಳಿಕ ಅ.25ರಂಂದು ಸಂಜೆ ಘಟನೆಯ ಕುರಿತು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಎಲ್ಯಾಸ್ ಪಿಂಟೋ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ಬಂಧಿಸಿರುವ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿತ್ತು. ಇದೀಗ ವಿಚಾರಣೆ ನಡೆಸಿದ ನ್ಯಾಯಾಲಯ ಅರೋಪಿಗೆ ಶರತ್ತುಬದ್ಧ ಜಾಮೀನು ಮಂಜೂರುಗೊಳಿಸಿದೆ.

- Advertisement -

Latest News

error: Content is protected !!