Saturday, June 28, 2025
Homeಕ್ರೀಡೆಟೋಕಿಯೋ ಒಲಿಂಪಿಕ್ಸ್: ಭಾರತ ಪಿ ವಿ ಸಿಂಧುಗೆ ಭರ್ಜರಿ ಜಯ; ಪ್ರಿ-ಕ್ವಾರ್ಟರ್ ಫೈನಲ್ ಗೆ ಲಗ್ಗೆ!

ಟೋಕಿಯೋ ಒಲಿಂಪಿಕ್ಸ್: ಭಾರತ ಪಿ ವಿ ಸಿಂಧುಗೆ ಭರ್ಜರಿ ಜಯ; ಪ್ರಿ-ಕ್ವಾರ್ಟರ್ ಫೈನಲ್ ಗೆ ಲಗ್ಗೆ!

spot_img
- Advertisement -
- Advertisement -

ಟೋಕಿಯೋ : ಟೋಕಿಯೋ ಒಲಿಂಪಿಕ್ಸ್​ನಲ್ಲಿ ಭಾರತದ ಬ್ಯಾಡ್ಮಿಂಟನ್‌ ಆಟಗಾರ್ತಿ ಪಿ.ವಿ. ಸಿಂಧೂ ಮಹಿಳಾ ಸಿಂಗಲ್ಸ್‌ ಬ್ಯಾಡ್ಮಿಂಟನ್‌ ವಿಭಾಗದಲ್ಲಿ ಇಂದು ನಡೆದ ಎರಡನೇ ಸುತ್ತಿನ ಪಂದ್ಯದಲ್ಲೂ ರೋಚಕ ಗೆಲುವು ಸಾಧಿಸುವ ಮೂಲಕ ಪ್ರಿ-ಕ್ವಾರ್ಟರ್ ಫೈನಲ್ ಗೆ ಲಗ್ಗೆ ಇಟ್ಟಿದ್ದಾರೆ.

ಬುಧವಾರ ನಡೆದ ಮಹಿಳಾ ಸಿಂಗಲ್ಸ್ ‘ಜೆ’ ಗುಂಪಿನ ಪಂದ್ಯದಲ್ಲಿ ಹಾಂಗ್ ಕಾಂಗ್ ನ ಚೆಂಗ್ ನಾನ್ ಯಿ ವಿರುದ್ಧ 21-9, 21-16 ಅಂತರದಿಂದ ಗೆಲುವು ಸಾಧಿಸಿದರು. ಇದರೊಂದಿಗೆ ಸಿಂಧು ಮೂರನೇ ಸುತ್ತಿಗೆ ಪ್ರವೇಶ ಪಡೆದಿದ್ದಾರೆ.

ಮೊದಲ ಪಂದ್ಯದಲ್ಲಿ ಅನಾಯಾಸವಾಗಿ ಗೆಲುವು ಸಾಧಿಸಿದ್ದ ಸಿಂಧುವಿಗೆ, ಎರಡನೇ ಪಂದ್ಯದಲ್ಲಿ ಹಾಂಕಾಂಗ್ ಆಟಗಾರ್ತಿಯಿಂದ ಪ್ರಬಲ ಪೈಪೋಟಿ ಎದುರಾಯಿತು. ಆರಂಭದಿಂದಲೇ ಉಭಯ ಆಟಗಾರ್ತಿಯರು ಸಮಬಲದ ಪ್ರದರ್ಶನ ತೋರಿದ್ದರು. ಆದರೆ 14 ಅಂಕಗಳಿಂದ ಸತತ 6 ಅಂಕಗಳನ್ನು ಗಳಿಸುವ ಮೂಲಕ ಸಿಂಧು, ಪಂದ್ಯವನ್ನು ತಮ್ಮತ್ತ ವಾಲುವಂತೆ ಮಾಡುವಲ್ಲಿ ಯಶಸ್ವಿಯಾದರು.

- Advertisement -
spot_img

Latest News

error: Content is protected !!