Wednesday, June 3, 2026
Homeಕರಾವಳಿಉಡುಪಿಉಡುಪಿ ಮತ್ತು ದ.ಕ. ಜಿಲ್ಲೆಯ ಪಿಡಬ್ಲ್ಯೂಡಿ ಎಂಜಿನಿಯರ್ ಗಳ ವರ್ಗಾವಣೆ

ಉಡುಪಿ ಮತ್ತು ದ.ಕ. ಜಿಲ್ಲೆಯ ಪಿಡಬ್ಲ್ಯೂಡಿ ಎಂಜಿನಿಯರ್ ಗಳ ವರ್ಗಾವಣೆ

- Advertisement -
- Advertisement -

ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯ ಲೋಕೋಪಯೋಗಿ ಇಲಾಖೆ ವಿಶೇಷ ಉಪ ವಿಭಾಗದ ಸಹಾಯಕ ಇಂಜಿನಿಯರ್ ಬಿ. ಶ್ರೀನಿವಾಸ ಅವರನ್ನು ವರ್ಗಾವಣೆ ಮಾಡಲಾಗಿದೆ.

ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಲೋಕೋಪಯೋಗಿ ಇಲಾಖೆ ಉಪ ವಿಭಾಗದ ಖಾಲಿ ಇರುವ ಹುದ್ದೆಗೆ ಶ್ರೀನಿವಾಸ್ ವರ್ಗಾವಣೆಗೊಂಡಿದ್ದಾರೆ.

ಬಂದರು ಮತ್ತು ಮೀನುಗಾರಿಕೆ ಇಲಾಖೆಯ ಮಂಗಳೂರು ಉಪ ವಿಭಾಗದ ಕಿರಿಯ ಎಂಜಿನಿಯರ್ ಚಂದ್ರಪ್ರಭಾ ಅವರನ್ನು ರಾಷ್ಟ್ರೀಯ ಹೆದ್ದಾರಿ ಮಂಗಳೂರು ಉಪವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ.

ಕಾರ್ಕಳ ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗದ ಕಿರಿಯ ಇಂಜಿನಿಯರ್ ಮಧುಕುಮಾರ್ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ವಾಪಸ್ ಪಡೆದು ಉಡುಪಿ ಲೋಕೋಪಯೋಗಿ ಉಪ ವಿಭಾಗದ ಕಿರಿಯ ಇಂಜಿನಿಯರ್ ಆಗಿ ನೇಮಿಸಲಾಗಿದೆ.

ಉಡುಪಿ ಲೋಕೋಪಯೋಗಿ ಉಪವಿಭಾಗದ ಕಿರಿಯ ಎಂಜಿನಿಯರ್ ಸೋಮನಾಥ್ ಅವರನ್ನು ಮುಂದಿನ ಸ್ಥಳ ನಿಯುಕ್ತಿಗಾಗಿ ಬೆಂಗಳೂರು ಮುಖ್ಯ ಇಂಜಿನಿಯರ್ ಕಚೇರಿಗೆ ವರದಿ ಮಾಡಿಕೊಳ್ಳಲು ಸೂಚಿಸಲಾಗಿದೆ.

ಲೋಕೋಪಯೋಗಿ ಇಲಾಖೆಯಲ್ಲಿ ಸಾರ್ವತ್ರಿಕ ವರ್ಗಾವಣೆ ಅಡಿಯಲ್ಲಿ 46 ಸಹಾಯಕ ಇಂಜಿನಿಯರ್ ಗಳನ್ನು ಮತ್ತು 50 ಕಿರಿಯ ಇಂಜಿನಿಯರ್ ಗಳನ್ನು ವರ್ಗಾವಣೆ ಮಾಡಲಾಗಿದೆ.

- Advertisement -

Latest News

error: Content is protected !!