- Advertisement -
- Advertisement -
ಬೆಂಗಳೂರು: ಕೊರೋನಾ ಸೋಂಕು ತಡೆಯುವ ಉದ್ದೇಶದಿಂದ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಇದೇ ಸಂದರ್ಭದಲ್ಲಿ 14 ದಿನಗಳ ಕಾಲ ರೋಗ ಲಕ್ಷಣ ಗಮನಿಸಲು ಮೇಲೆ ನಿಗಾ ವಹಿಸಲು ಕ್ವಾರಂಟೈನ್ ನಲ್ಲಿ ಇರಿಸಲಾಗುತ್ತಿದೆ. ಈ ಅವಧಿಯನ್ನು 14 ದಿನಗಳ ಬದಲಿಗೆ 28 ದಿನಗಳಿಗೆ ಹೆಚ್ಚಿಸಲಾಗಿದೆ.
ಕ್ವಾರಂಟೈನ್ ಅವಧಿಯನ್ನು 28 ದಿನಗಳಿಗೆ ಹೆಚ್ಚಳ ಮಾಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಇದುವರೆಗೆ ತಬ್ಲಿಘಿ ಜಮಾತ್ ನಲ್ಲಿ ಭಾಗವಹಿಸಿದ 1330 ಮಂದಿಯನ್ನು ಪತ್ತೆಮಾಡಿ ಪರೀಕ್ಷೆಗೆ ಒಳಪಡಿಸಲಾಗಿದ್ದು, 40 ಮಂದಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.
ಇನ್ನೂ ಅನೇಕರು ಮಾಹಿತಿ ಕೊಟ್ಟಿಲ್ಲ. ಅವರನ್ನು ಹುಡುಕಿ ಪರೀಕ್ಷೆಗೆ ಒಳಪಡಿಸುವ ಕಾರ್ಯಾಚರಣೆ ಮುಂದುವರೆಸಲಾಗಿದೆ ಎಂದು ಹೇಳಿದ್ದಾರೆ.
- Advertisement -