- Advertisement -
![]()
- Advertisement -
ವಿಟ್ಲದ ಖಾಸಗಿ ಕಾಲೇಜಿನಲ್ಲಿ ಸಹಪಾಠಿಗಳ ಮಧ್ಯೆ ಕಿರಿಕ್ ಉಂಟಾಗಿ ಪೆನ್ ಚಾಕುವಿನಿಂದ ವಿದ್ಯಾರ್ಥಿಯೊಬ್ಬ ಇರಿದ ಘಟನೆ ನಡೆದಿದೆ.
ದಿನಾಂಕ 11-02-20260ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ, ಖಾಸಗಿ ಕಾಲೇಜಿನಲ್ಲಿ ಸಹಪಾಠಿಗಳಾದ ಹೇಮಂತ್ (19) ಹಾಗೂ ಪುತ್ತೂರು ಬನ್ನೂರು ನಿವಾಸಿ ಮಹಮ್ಮದ್ ರಿಯಾನ್ ಮಧ್ಯೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ಈ ವೇಳೆ ಹೇಮಂತ್ ಮಹಮ್ಮದ್ ರಿಯಾನ್ ಗೆ ಪೆನ್ ಚಾಕುವಿನಿಂದ ಇರಿದಿದ್ದಾನೆ. ಈ ವೇಳೆ ಅದನ್ನು ತಡೆಯಲು ಬಂದ ಮತ್ತೋರ್ವ ವಿದ್ಯಾರ್ಥಿ ಯಜೇಶ್ ಗೂ ಗಾಯವಾಗಿದೆ.
ಗಾಯಗೊಂಡ ವಿದ್ಯಾರ್ಥಿಯನ್ನು ಆಸ್ಪತ್ರೆಯಲ್ಲಿ ದಾಖಲಿಸಿದ್ದು ಅಪಾಯದಿಂದ ಪಾರಾಗಿದ್ದಾನೆ. ಹೇಮಂತ್ ನ್ನು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -


