Friday, June 5, 2026
Homeಕರಾವಳಿಮಂಗಳೂರಿನಲ್ಲಿ ಕ್ವಿಟ್ ಇಂಡಿಯಾ ಚಳುವಳಿ ಸ್ಮರಣೆ: ಮಟ್ಟಾರು ವಿಠಲ್ ಕಿಣಿಯವರಿಗೆ ದ.ಕ. ಜಿಲ್ಲಾಡಳಿತದಿಂದ ಗೌರವ ಸಮರ್ಪಣೆ

ಮಂಗಳೂರಿನಲ್ಲಿ ಕ್ವಿಟ್ ಇಂಡಿಯಾ ಚಳುವಳಿ ಸ್ಮರಣೆ: ಮಟ್ಟಾರು ವಿಠಲ್ ಕಿಣಿಯವರಿಗೆ ದ.ಕ. ಜಿಲ್ಲಾಡಳಿತದಿಂದ ಗೌರವ ಸಮರ್ಪಣೆ

- Advertisement -
- Advertisement -

ಮಂಗಳೂರು: ಕ್ವಿಟ್ ಇಂಡಿಯಾ ಚಳುವಳಿಯ ಭಾಗವಾಗಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಿದ್ದ ಮಟ್ಟಾರು ವಿಠಲ್ ಕಿಣಿಯವರಿಗೆ ಇಂದು ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಗೌರವಿಸಲಾಗಿದೆ.

ವಿಠಲ್ ಕಿಣಿಯವರ ಮನೆಗೆ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಮತ್ತು ಶಾಸಕ ವೇದವ್ಯಾಸ ಕಾಮತ್ ಭೇಟಿ ನೀಡಿ ಗೌರವ ಸಮರ್ಪಿಸಿದ್ದಾರೆ. ಮಟ್ಟಾರು ವಿಠಲ್ ಕಿಣಿ ತನ್ನ ಹೈಸ್ಕೂಲ್ ಜೀವನದ‌ ಸಂದರ್ಭದಲ್ಲಿ ಕ್ವಿಟ್ ಇಂಡಿಯಾ ಚಳುವಳಿ, ಗೋವಾ ಚಳುವಳಿ, ತುರ್ತು ಪರಿಸ್ಥಿತಿಯ ಹೋರಾಟದಲ್ಲಿ ಭಾಗವಹಿಸಿದ್ದರು.

ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್, ಸ್ಥಳೀಯ ಕಾರ್ಪೋರೇಟರ್ ಶ್ರೀಮತಿ ಜಯಶ್ರೀ ಕುಡ್ವ, ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಸಂದೀಪ್ ಗರೋಡಿ, ಹಾಗೂ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

- Advertisement -

Latest News

error: Content is protected !!