Monday, June 8, 2026
Homeಕರಾವಳಿಮಂಗಳೂರಿನಲ್ಲಿ ಶಿಶು ಪಾಲನಾ ಕೇಂದ್ರ ಹಾಗೂ ಮಹಿಳಾ ವಿಶ್ರಾಂತಿ ಕೊಠಡಿಗೆ ಕಂದಾಯ ಸಚಿವ ಆರ್. ಅಶೋಕ್...

ಮಂಗಳೂರಿನಲ್ಲಿ ಶಿಶು ಪಾಲನಾ ಕೇಂದ್ರ ಹಾಗೂ ಮಹಿಳಾ ವಿಶ್ರಾಂತಿ ಕೊಠಡಿಗೆ ಕಂದಾಯ ಸಚಿವ ಆರ್. ಅಶೋಕ್ ಚಾಲನೆ

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಆವರಣದಲ್ಲಿ ಶಿಶು ಪಾಲನಾ ಕೇಂದ್ರ ಹಾಗೂ ಮಹಿಳಾ ವಿಶ್ರಾಂತಿ ಕೊಠಡಿ ಉದ್ಘಾಟನೆಗೊಂಡಿದೆ. ಕಂದಾಯ ಸಚಿವ ಆರ್. ಅಶೋಕ್ ಕೊಠಡಿ ಉದ್ಘಾಟನೆ ಮಾಡಿದರು.


ಇದರ ಜೊತೆಗೆ ನೇತ್ರಾವತಿ ಸಭಾಂಗಣದಲ್ಲಿ ಜನರ ಅನುಕೂಲಕ್ಕಾಗಿ ಕಡತ ವಿಲೇವಾರಿ ಅಭಿಯಾನಕ್ಕೆ ದೀಪ ಬೆಳಗಿಸುವ ಮೂಲಕ ಸಚಿವ ಅಶೋಕ್ ಚಾಲನೆ ನೀಡಿದರು. ಈ ವೇಳೆ ದುಗ್ಗಪ್ಪ ಪೂಜಾರಿ ಹಾಗೂ ಇತರರಿಗೆ 94 ಸಿಸಿ ಅಡಿಯಲ್ಲಿ ಹಕ್ಕುಪತ್ರ ಮತ್ತು ಪಿಂಚಣಿ ಪ್ರಮಾಣಪತ್ರ ಹಾಗೂ ನೇಮಕಾತಿ ಪತ್ರವನ್ನು ಸಚಿವರು ವಿತರಿಸಿದರು.
ಈ ಸಂದರ್ಭದಲ್ಲಿ ಇಂಧನ ಸಚಿವ ಸುನಿಲ್ ಕುಮಾರ್, ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement -

Latest News

error: Content is protected !!