Wednesday, June 3, 2026
Homeತಾಜಾ ಸುದ್ದಿಜೂನಿಯರ್ ಚಿರುಗೆ ರಾಯನ್ ರಾಜ್ ಸರ್ಜಾ ಎಂದು ಹೆಸರಿಟ್ಟ ಸರ್ಜಾ ಹಾಗೂ ಮೇಘನಾ ರಾಜ್ ಕುಟುಂಬ!

ಜೂನಿಯರ್ ಚಿರುಗೆ ರಾಯನ್ ರಾಜ್ ಸರ್ಜಾ ಎಂದು ಹೆಸರಿಟ್ಟ ಸರ್ಜಾ ಹಾಗೂ ಮೇಘನಾ ರಾಜ್ ಕುಟುಂಬ!

- Advertisement -
- Advertisement -

ಬೆಂಗಳೂರು: ಚಿರಂಜೀವಿ ಸರ್ಜಾ ಹಾಗೂ ಮೇಘನಾ ದಂಪತಿ ಪುತ್ರ ಜ್ಯೂನಿಯರ್ ಚಿರು ಎಂದೇ ಖ್ಯಾತಿಯಾಗಿರುವ ಮುದ್ದು ಮಗನಿಗೆ ಸರ್ಜಾ ಫ್ಯಾಮಿಲಿ ಇಂದು ನಾಮಕರಣ ಮಾಡಿದ್ದು ರಾಯನ್ ರಾಜ್ ಸರ್ಜಾ ಎಂದು ಹೆಸರಿಟ್ಟಿದ್ದಾರೆ.

ಇಂದು ಬೆಂಗಳೂರಿನ ಚಾನ್ಸರಿ ಪೆವಿಲಿಯನ್ ಹೊಟೇಲ್‌ನಲ್ಲಿ ಜ್ಯೂನಿಯರ್ ಚಿರು ನಾಮಕರಣ ಮಾಡಿದ್ದಾರೆ.ಸಾಮಾಜಿಕ ಜಾಲತಾಣದಲ್ಲಿ ವಿಶೇಷ ವಿಡಿಯೋ ಮೂಲಕ ಜ್ಯೂನಿಯರ್ ಚಿರು ಹೆಸರನ್ನು ಮೇಘನಾ ರಾಜ್ ಸರ್ಜಾ ಹಾಕಿದ್ದಾರೆ.

ಬೆಳಗ್ಗೆಯಿಂದ ಆರಂಭವಾಗಿರುವ ಪೂಜೆಯಲ್ಲಿ ಚಿರಂಜೀವಿ ಸರ್ಜಾ ಪೋಷಕರೂ ಭಾಗಿಯಾಗಿದ್ದಾರೆ. ಮೊಮ್ಮಗನನ್ನು ಮಡಿಲಿನಲ್ಲಿ ಕೂರಿಸಿಕೊಂಡು ಪೂಜೆ ಮಾಡಿದ್ದಾರೆ ಚಿರಂಜೀವಿ ಪೋಷಕರು. ರಾಯನ್ ರಾಜ್ ಎಂದು ನಾಮಕರಣ ಮಾಡಿರೋ ಕುಟುಂಬ. ಸಂಸ್ಕೃತದಲ್ಲಿ ರಾಯನ್ ರಾಜ್ ಎಂದರೆ ಯುವರಾಜ ಅಂತ ಅರ್ಥ.

- Advertisement -

Latest News

error: Content is protected !!